Publish Date: Mon, 18 May 2020 (18:51 IST)
Updated Date: Mon, 18 May 2020 (18:52 IST)
ಬೆಂಗಳೂರಿನಿಂದ ಉತ್ತರಪ್ರದೇಶಕ್ಕೆ ಹೋಗುತ್ತಿದ್ದ ಸುಮಾರು 130 ವಲಸೆ ಕಾರ್ಮಿಕರನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಅನಧಿಕೃತವಾಗಿ ಖಾಸಗಿ ಕಂಟೇನರ್ ಲಾರಿ ಮೂಲಕ ಹುಬ್ಬಳ್ಳಿಗೆ ಆಗಮಿಸುತ್ತಿದ್ದಂತೆ ಬೆಂಡಿಗೇರಿ ಪೊಲೀಸ್ ಠಾಣೆ ಅಧಿಕಾರಿಗಳು ತಡೆದು ಪರಿಶೀಲನೆ ನಡೆಸಿದ್ದಾರೆ.
ಗಬ್ಬೂರ್ ಬೈ ಪಾಸ್ ಹತ್ತಿರ ಎರಡು ಕಂಟೇನರ್ ಲಾರಿ ಮೂಲಕ ಆಗಮಿಸಿದ ವಲಸೆ ಕಾರ್ಮಿಕರನ್ನು ತಡೆದು ದಾಖಲೆ ಪರಿಶೀಲನೆ ನಡೆಸಲಾಯಿತು. ಇನ್ನೂ ಎರಡು ಲಾರಿಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ 130 ವಲಸೆ ಕಾರ್ಮಿಕರು ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸುವವರೆಗೂ ಕೂಡ ಯಾವುದೇ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸಿಲ್ಲ.
ಜಿಲ್ಲಾಡಳಿತ ಶ್ರಮಿಕ್ ಎಕ್ಸ್‌ಪ್ರೆಸ್ ಮೂಲಕ ಉತ್ತರ ಪ್ರದೇಶಕ್ಕೆ ವಲಸೆ ಕಾರ್ಮಿಕರನ್ನು ಕಳಿಸಿಕೊಡುವ ಸಾಧ್ಯತೆಗಳು ಹೆಚ್ಚಾಗಿವೆ.