Select Your Language

Notifications

webdunia
webdunia
webdunia
webdunia

ಗದಗದಲ್ಲಿ ಬೆಚ್ಚಿಬೀಳಿಸಿದ ನಾಲ್ವರ ಕೊಲೆ ಪ್ರಕರಣ: ತಂದೆ ತಾಯಿ ಹತ್ಯೆಗೆ ಸುಪಾರಿ ಕೊಟ್ಟ ಮಗ ಸೇರಿ 8 ಜನರ ಬಂಧನ

ಗದಗದಲ್ಲಿ ಬೆಚ್ಚಿಬೀಳಿಸಿದ ನಾಲ್ವರ ಕೊಲೆ ಪ್ರಕರಣ: ತಂದೆ ತಾಯಿ ಹತ್ಯೆಗೆ ಸುಪಾರಿ ಕೊಟ್ಟ ಮಗ ಸೇರಿ 8 ಜನರ ಬಂಧನ

Sampriya

ಗದಗ , ಸೋಮವಾರ, 22 ಏಪ್ರಿಲ್ 2024 (18:46 IST)
ಗದಗ: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಗದಗ ಜಿಲ್ಲೆಯ ಬೆಟಗೇರಿಯಲ್ಲಿ ಒಂದೇ ಮನೆಯಲ್ಲಿ ನಡೆದ ನಾಲ್ವರು ಹತ್ಯೆ ಪ್ರಕರಣವನ್ನು ಭೇದಿಸಿದ ಪೊಲೀಸರು, ತಂದೆ-ತಾಯಿ ಕೊಲೆಗೆ ಸುಪಾರಿ ನೀಡಿದ ಹಿರಿಯ ಮಗ ಸಹಿತ ಒಟ್ಟು 8 ಜನರನ್ನು ಅರೆಸ್ಟ್ ಮಾಡಿದ್ದಾರೆ.

ಗದಗ ಉತ್ತರ ವಲಯ ಐಜಿಪಿ ವಿಕಾಸ್ ಕುಮಾರ್ ಮಾತನಾಡಿ, ಗದಗ ಎಸ್​​ಪಿ ಬಿಎಸ್ ನೇಮಗೌಡ ನೇತೃತ್ವದ ತಂಡ  ಘಟನೆ ನಡೆದ 48 ಗಂಟೆಗಳ ಒಳಗಾಗಿಯೇ ಎಲ್ಲಾ ಆರೋಪಿಗಳನ್ನು ಬಂಧಿಸಿದ್ದಾರೆ.

ದೂರುದಾರ ಪ್ರಕಾಶ ಬಾಕಳೆ ಅವರ ಮೊದಲ ಹೆಂಡತಿಯ ಹಿರಿಯ ಮಗ ವಿನಾಯಕ ಬಾಕಳೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ಪ್ರಕಾಶ ಬಾಕಳೆ ಹಾಗೂ ವಿನಾಯಕ ಬಾಲಳೆ ಮಧ್ಯೆ ಆಸ್ತಿ ವಿಚಾರವಾಗಿ ಕೆಲ ತಿಂಗಳ ಹಿಂದೆ ಜಗಳ ನಡೆದಿದೆ. ಇನ್ನೂ ತಂದೆಗೆ ಗೊತ್ತಿಲ್ಲದಂತೆ ವಿನಾಯಕ ಆಸ್ತಿಗಳನ್ನು ಮಾರಿದ್ದರಿಂದ ಪ್ರಕಾಶ ಬಾಕಳೆ ಆಕ್ರೋಶಗೊಂಡಿದ್ದ. ಈ ವಿಚಾರವಾಗಿ ಇಬ್ಬರ ಮಧ್ಯೆ ಕಲಹ ನಡೆದಿತ್ತು. ಇದೇ ಕಾರಣಕ್ಕೆ ವಿನಾಯಕ ಕೊಲೆಗೆ ಸುಪಾರಿ ನೀಡಿದ್ದ ಎನ್ನುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಸುಪಾರಿ ಪಡೆದ ಗದಗ ರಾಜೀವಗಾಂಧಿ ನಗರ ನಿವಾಸಿ ಫಿರೋಜ್ ನಿಸಾರ ಅಹ್ಮದ್ ಖಾಜಿ(29), ಹುಡ್ಕೋ ನಿವಾಸಿ ಜಿಶಾನ್ ಮೆಹಬೂಬಅಲಿ ಖಾಜಿ(24) ಹಾಗೂ ಮಹಾರಾಷ್ಟದ ಮೀರಜ್ ನಿವಾಸಿಗಳಾದ ಸಾಹಿತ್ ಅಷ್ಪಾಕ್ ಖಾಜಿ(19), ಸೋಹೆಲ್ ಅಷ್ಪಾಕ್ ಖಾಜಿ(19), ಸುಲ್ತಾನ್ ಜಿಲಾನಿ ಖಾಜಿ(23), ಮಹೇಶ ಜಗನ್ನಾಥ ಸಾಳೋಂಕೆ (21), ವಾಹಿದ ಲಿಯಾಕತ್ ಬೇಪಾರಿ(21) ಅವರನ್ನು ಬಂಧಿಸಲಾಗಿದೆ ಎಂದು ವಿಕಾಸ್ ಕುಮಾರ್ ಅವರು ತಿಳಿಸಿದ್ದಾರೆ.

ಇನ್ನೂ ತಂದೆ ತಾಯಿ ಹತ್ಯೆಗೆ ಸಂಚು ರೂಪಿಸಿದ್ದಾರೆ. ಘಟನೆ ದಿನ ಪ್ರಕಾಶ್ ಹಾಗೂ ಅವರ ಪತ್ನಿ ಸುನಂದಾ ಬೇರೆ ಕೋಣೆಯಲ್ಲಿ ಮಲಗಿದ್ದರು. ಹೀಗಾಗಿ ಅವರು ಸಾವಿನಿಂದ ಸ್ವಲ್ಪದರಲ್ಲೇ ಬಚಾವ್ ಆಗಿದ್ದು, ಮನೆಗೆ ನುಗ್ಗಿದ್ದ ಹಂತಕರು ಅವರ ಬದಲಿಗೆ ಕಾರ್ತಿಕ್ ಜೊತೆ ಇದ್ದ ಅಮಾಯಕ ಸಂಬಂಧಿಕರನ್ನು ಹತ್ಯೆ ಮಾಡಿದ್ದಾರೆ.

ಮಲಗಿರುವುದು ಪ್ರಕಾಶ್ ಹಾಗೂ ಸುನಂದಾ ಎಂದು ಭಾವಿಸಿ ಹಂತಕರು ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಜತೆಗಿದ್ದ ಕೊಪ್ಪಳದ ಭಾಗ್ಯ ನಗರ ನಿವಾಸಿ, ಹೋಟೆಲ್ ಉದ್ಯಮಿ ಪರಶುರಾಮ(55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ(16) ಅವರನ್ನು ಹತ್ಯೆ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೇಜ್ರಿವಾಲ್‌ಗೆ ವೈದ್ಯರೊಂದಿಗೆ ವಿಡಿಯೋ ಕಾನ್ಫರೆನ್ಸ್‌ಗೆ ನಿರಾಕರಿಸಿದ ಕೋರ್ಟ್‌