Webdunia - Bharat's app for daily news and videos

Install App

ಶಾಕಿಂಗ್ ನ್ಯೂಸ್, ಪ್ರೀತಿಯಿಂದ ಸಾಕಿದ ಬೆಕ್ಕಿನಿಂದಲೇ ಮನೆಯೊಡತಿ ಸಾವು

Sampriya
ಶುಕ್ರವಾರ, 9 ಆಗಸ್ಟ್ 2024 (19:41 IST)
Photo Courtesy X
ಶಿವಮೊಗ್ಗ: ಮನೆ ಬೆಕ್ಕು ಕಚ್ಚಿದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಇಲ್ಲಿನ ಶಿಕಾರಿಪುರ ತಾಲೂಕಿನ ತರಲಘಟ್ಟದಲ್ಲಿ ನಡೆದಿದೆ. ಮೃತ ಮಹಿಳೆಯನ್ನು 50ವರ್ಷದ ಗಂಗೀಬಾಯಿ ಎಂದು ಗುರುತಿಸಲಾಗಿದೆ.

ಗಂಗೀಬಾಯಿ ಅವರಿಗೆ ಕಚ್ಚುವ ಮುನ್ನಾ ಇದೇ ಬೆಕ್ಕು ತರಲಘಟ್ಟದ ಕ್ಯಾಂಪ್​ನಲ್ಲಿರುವ ಯುವಕನೋರ್ವನ ಮೇಲೆ ದಾಳಿ ಮಾಡಿತ್ತು. ಆತ ಸೂಕ್ತ ಜೌಷಧಿ ಪಡೆದುಕೊಂಡಿದ್ದರಿಂದ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಆದರೆ ಮಹಿಳೆಗೆ ಬೆಕ್ಕು ಕಚ್ಚಿದ ಸಂದರ್ಭ ಆಕೆ ಕ್ಯಾರೇ ಎನ್ನಲಿಲ್ಲ. ಈ ಸಂದರ್ಭದಲ್ಲಿ ಸೂಕ್ತ ಇಂಜೆಕ್ಷನ್ ತೆಗೆದುಕೊಳ್ಳುತ್ತಿದ್ದರೆ ಪ್ರಾಣಪಾಯದಿಂದ ಪಾರಾಗುತ್ತಿದ್ದರು.

ಬೆಕ್ಕಿನ ದಾಳಿಯ ಗಾಯದಿಂದ ಚೇತರಿಸಿಕೊಂಡ ಕಾರಣ ಮಹಿಳೆ ಆಸ್ಪತ್ರೆಗೆ ಹೋಗಿ ಸೂಕ್ತ ಚಿಕಿತ್ಸೆ ಪಡೆಯಲಿಲ್ಲ. ಕಳೆದ ಎರಡು ದಿನದಿಂದ ಮಹಿಳೆಯ ಆರೋಗ್ಯದಲ್ಲಿ ಏಕಾಏಕಿ ಏರುಪೇರಾಗಿದೆ. ದೇಹದಲ್ಲಿ ನಂಜು ಏರುತ್ತಲೇ ಹೋಗಿತ್ತು. ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆಯಲ್ಲಿ ಮಹಿಳೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಹಿಳೆಯು ಇಂದು ಮೃತಪಟ್ಟಿದ್ದಾಳೆ.

ಈ ಬಗ್ಗೆ ಮೆಗ್ಗಾನ್ ಜಿಲ್ಲಾಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಟಿ.ಡಿ ತಿಮ್ಮಪ್ಪ ಪ್ರತಿಕ್ರಿಯಿಸಿದ್ದು, ನಾಯಿಯು ಬೆಕ್ಕಿಗೆ ಕಚ್ಚಿರಬೇಕು. ಇದರಿಂದ ಬೆಕ್ಕಿಗೆ ರೇಬಿಸ್ ಇದ್ದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಹೀಗಾಗಿ ಮಹಿಳೆ ರೇಬಿಸ್​ನಿಂದ ಮೃತಪಟ್ಟಿದ್ದಾಳೆಂದು ಶಂಕಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments