Publish Date: Sat, 20 Nov 2021 (11:28 IST)
Updated Date: Sat, 20 Nov 2021 (11:30 IST)
ದೊಡ್ಡಬಳ್ಳಾಪುರ : ಲಾರಿ ಮತ್ತು ಬೈಕ್ನ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಸ್ಥಳದಲ್ಲಿಯೇ ದಂಪತಿ ದುರ್ಮರಣಕ್ಕೀಡಾಗಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಕತ್ತಿಹೊಸಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ದೊಡ್ಡಬೆಳವಂಗಲ ಗ್ರಾಮದ ಶ್ಯಾಮನಾಯಕ್ (55) ಮತ್ತು ಶಾರದಮ್ಮ(45) ಮೃತ ದಂಪತಿ.
ದೊಡ್ಡಬಳ್ಳಾಪುರದಿಂದ ದಾಬಸ್ ಪೇಟೆಗೆ ತೆರಳುವಾಗ ಅಪಘಾತ ನಡೆದಿದೆ. ಅಪಘಾತದ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.