Publish Date: Thu, 12 May 2022 (09:17 IST)
Updated Date: Thu, 12 May 2022 (09:23 IST)
ಹುಬ್ಬಳ್ಳಿ : ವ್ಯಕ್ತಿಯೊಬ್ಬ ಮೊಬೈಲ್ ಕರೆನ್ಸಿಗೆ ಹಣ ನೀಡಿಲ್ಲವೆಂದು ಮರ್ಮಾಂಗಕ್ಕೆ ತ್ರಿಶೂಲ ಚುಚ್ಚಿಕೊಂಡ ಘಟನೆ ಧಾರವಾಡ ತಾಲೂಕಿನ ನವಲೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿ ಬಸವರಾಜ ಅವರ ಮಗ ಮೈಲಾರಿ ಮರ್ಮಾಂಗಕ್ಕೆ ತ್ರಿಶೂಲ ಚುಚ್ಚಿಕೊಂಡ ಯುವಕ. ಕೇವಲ ಆರನೇಯ ತರಗತಿ ಓದಿರುವ ಮೈಲಾರಿಯ ವಯಸ್ಸು 20 ದಾಟಿದ್ದರು, ಯಾವುದೇ ಕೆಲಸ ಮಾಡದೇ ಕಾಲ ಕಳೆಯುತ್ತಿದ್ದ.
ಜೊತೆಗೆ ಮೊಬೈಲ್ ಹುಚ್ಚು ಜಾಸ್ತಿ ಹಿಡಿಸಿಕೊಂಡಿದ್ದ. ನಿನ್ನೆ ಮೈಲಾರಿಯ ಮೊಬೈಲ್ ಕರೆನ್ಸಿ ಖಾಲಿಯಾಗಿತ್ತು. ಹೀಗಾಗಿ ಮೈಲಾರಿ ತನ್ನ ತಂದೆ ಬಳಿ ಹಣ ಕೇಳಿದ್ದಾನೆ. ಆದರೆ ತಂದೆ ಮೊಬೈಲ್ಗೆ ಕರೆನ್ಸಿ ಹಾಕಿಸಲು ಒಪ್ಪಿರಲಿಲ್ಲ. ಈ ಕಾರಣಕ್ಕಾಗಿ ಮನೆಯಲ್ಲಿ ಜಗಳವಾಗಿದೆ.
ಇದರಿಂದಾಗಿ ಕೋಪಗೊಂಡ ಯುವಕ ಗೊರಪ್ಪನ ವೇಶ ಹಾಕಿಕೊಂಡು ಮನೆಯ ಹತ್ತಿರ ದೇವಸ್ಥಾನಕ್ಕೆ ತೆರಳಿದ್ದಾನೆ. ದೇವಸ್ಥಾನಕ್ಕೆ ತೆರಳಿ ಅಲ್ಲಿರುವ ತ್ರಿಶೂಲವನ್ನು ತನ್ನ ಮರ್ಮಾಂಗಕ್ಕೆ ಚುಚ್ಚಿಕೊಂಡು ಅಸ್ವಸ್ಥನಾಗಿ ಬಿದ್ದಿದ್ದಾನೆ.