Select Your Language

Notifications

webdunia
webdunia
webdunia
webdunia

ಹಿಂದೂ ಯುವತಿಯರು ರಕ್ಷಣೆಗೆ ವಿಭಿನ್ನ ಹೆಜ್ಜೆಯಿಟ್ಟ ಶ್ರೀರಾಮ ಸೇನೆ

Pramodh Mutalik

sampriya

ಹುಬ್ಬಳ್ಳಿ , ಬುಧವಾರ, 29 ಮೇ 2024 (14:03 IST)
Photo By X
ಹುಬ್ಬಳ್ಳಿ: ರಾಜ್ಯದಲ್ಲಿ ಹೆಚ್ಚಾಗುತಿರುವ ಲವ್ ಜಿಹಾದ್‌ ಪ್ರಕರಣಗಳಿಗೆ ಬ್ರೇಕ್‌ ಹಾಕಲು ಶ್ರೀರಾಮ ಸೇನೆ ವತಿಯಿಂದ ಸಹಾಯವಾಣಿಗೆ ಚಾಲನೆ ನೀಡಲಾಗಿದೆ.

ಈ ಸಂಬಂಧ ಕ್ಯೂಬಿಕ್ಸ್‌ ಹೊಟೇಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಹಾಯವಾಣಿಗೆ ಚಾಲನೆ ನೀಡಿ ಮಾತನಾಡಿದ ಅವರು, ಹಿಂದೂ ಯುವತಿಯರು, ಮಹಿಳೆಯರನ್ನು ರಕ್ಷಿಸಲು ಶ್ರೀರಾಮ ಸೇನೆ ವತಿಯಿಂದ ಸಹಾಯವಾಣಿ ಆರಂಭಿಸಲಾಗಿದೆ. ರಾಜ್ಯದಲ್ಲಿ ಇಂತಹ ಪ್ರಕರಣಗಳು ನಿಲ್ಲುವವರೆಗೆ ನಿರಂತರವಾಗಿ ಸಹಾಯವಾಣಿ ಕಾರ್ಯನಿರ್ವಹಿಸಲಿದೆ ಎಂದರು.

ಈ ಸಹಾಯವಾಣಿ ದಿನದ 24ಗಂಟೆಯಲ್ಲಿ ಯಾವಾಗ ಬೇಕಾದರೂ ಕರೆ ಮಾಡಬಹುದು. ಸಹಾಯವಾಣಿ ಸಂಖ್ಯೆ 90904 43444ಗೆ ಮಹಿಳೆಯರು, ಯುವತಿಯರು ಕರೆ ಮಾಡಿ ರಕ್ಷಣೆ ಕೇಳಬಹುದು

ಹುಬ್ಬಳ್ಳಿಯಲ್ಲಿರುವ ನಮ್ಮ ಸಂಘಟನೆಯ ಕಚೇರಿಯಿಂದ ಸಹಾಯವಾಣಿಯನ್ನು ನಿರ್ವಹಣೆ ಮಾಡಲಾಗುವುದು. ಇದಕ್ಕೆ ವಕೀಲರು, ಮಹಿಳಾ ಆಪ್ತಸಮಾಲೋಚಕರನ್ನೊಳಗೊಂಡ ಐವರ ತಂಡ ಕಾರ್ಯನಿರ್ವಹಿಸಲಿದೆ ಎಂದರು.

ಆಪ್ತ ಸಮಾಲೋಚನೆ ಮೂಲಕ ಮಹಿಳೆಯರಿಗೆ ಧೈರ್ಯ ತುಂಬಲಾಗುತ್ತದೆ. ಹಿಂದೂ ಮಹಿಳೆಯರು ಯಾವುದೇ ಕಾರಣಕ್ಕೂ ಆತ್ಮಹತ್ಯೆಗೆ ಶರಣಾಗಬಾರದು. ನಿಮ್ಮ ಜತೆಗೆ ಶ್ರೀರಾಮಸೇನಾ ಸಂಘಟನೆ ಇರಲಿದೆ ಎಂದು ಧೈರ್ಯ ತುಂಬಿದರು

 

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಜ್ವಲ್ ರೇವಣ್ಣ ಹಾಸಿಗೆ ಹೊತ್ತೊಯ್ದ ಎಸ್ಐಟಿ ತಂಡ