Webdunia - Bharat's app for daily news and videos

Install App

ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್‌ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ?

Webdunia
ಬುಧವಾರ, 19 ಅಕ್ಟೋಬರ್ 2016 (15:20 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರದ ಗದ್ದುಗೆ ಹಿಡಿಯಲೇ ಬೇಕು ಎಂದು ಪಣ ತೊಟ್ಟಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ಪಕ್ಷದಿಂದ ಅಸಮಾಧಾನಗೊಂಡ ನಾಯಕರಿಗೆ ಮಣೆ ಹಾಕುತ್ತಿದ್ದು, ಇಂದು ಜೆಡಿಎಸ್ ಪಕ್ಷಕ್ಕೆ ಬರುವಂತೆ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರಿಗೆ ಆಹ್ವಾನ ನೀಡಿದ್ದಾರೆ. 
 
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರು ಆರ್‌ಎಂವಿ ಎಕ್ಸ್‌ಟೆನ್ಷನ್‌ನಲ್ಲಿರುವ ಶ್ರೀನಿವಾಸ್ ಪ್ರಸಾದ್ ನಿವಾಸಕ್ಕೆ ಭೇಟಿ ನೀಡಿ, ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆಸಿದರು. ಹಾಗೂ ಜೆಡಿಎಸ್ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ ಎಂದು ತಿಳಿದು ಬಂದಿದೆ. 
 
ರಾಜ್ಯ ಸಚಿವ ಸಂಪುಟದಿಂದ ಸ್ಥಾನ ಕಳೆದುಕೊಂಡಿದ್ದ ಹಿರಿಯ ಕಾಂಗ್ರೆಸ್ ನಾಯಕ ಶ್ರೀನಿವಾಸ್ ಪ್ರಸಾದ್ ಅವರು  ಅ.17 ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
 
ಕಾಂಗ್ರೆಸ್ ಪಕ್ಷ ತೊರೆದ ಮೇಲೆ ಶ್ರೀನಿವಾಸ ಪ್ರಸಾದ್ ಅವರಿಗೆ ಬಿಜೆಪಿ ಹಾಗೂ ಜೆಡಿಎಸ್ ಮಣೆ ಹಾಕುತ್ತಿವೆ. ಆದರೆ, ಪ್ರಸಾದ್ ಅವರು ಯಾವ ಪಕ್ಷಕ್ಕೆ ಸೇರುತ್ತಾರೆ ಎನ್ನುವುದು ಕಾದು ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments