Select Your Language

Notifications

webdunia
webdunia
webdunia
webdunia

ನಟಿ ರಮ್ಯಾರಿಗೆ ಅಜ್ಞಾನ ಕವಿದಿದೆ ಎಂದ ಮುತಾಲಿಕ್

ನಟಿ ರಮ್ಯಾರಿಗೆ ಅಜ್ಞಾನ ಕವಿದಿದೆ ಎಂದ ಮುತಾಲಿಕ್
ವಿಜಯಪುರ , ಶನಿವಾರ, 27 ಆಗಸ್ಟ್ 2016 (10:03 IST)
ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಪಾಕಿಸ್ತಾನದ ಪರ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಮ್ಯಾ ಪ್ರಚಾರಕ್ಕಾಗಿ ಹೇಳಿಕೆ ನೀಡಿದ್ದಾರೆ. ಅವರಿಗೆ ಅಜ್ಞಾನ ಕವಿದಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಲೇವಡಿ ಮಾಡಿದ್ದಾರೆ.
 
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಪ್ರಚಾರಕ್ಕಾಗಿ ಪಾಕಿಸ್ತಾನದ ಪರವಾಗಿ ಹೇಳಿಕೆ ನೀಡಿದ್ದಾರೆ. ಸಣ್ಣ ಮಕ್ಕಳಿಗೂ ಗೊತ್ತು ಪಾಕಿಸ್ತಾನ ಎಂತಹ ದೇಶವೆಂದು. ಆದರೆ, ರಮ್ಯಾಗೆ ಗೊತ್ತಿಲ್ಲವೆ ಎಂದು ಪ್ರಶ್ನಿಸಿದರು.
 
ಚುನಾವಣೆಯಲ್ಲಿ ಮುಸ್ಲಿಂರ ವೋಟು ಪಡೆಯುವ ಹಿನ್ನೆಲೆಯಲ್ಲಿ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಪಾಕಿಸ್ತಾನದ ಪರವಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದರು.
 
ಅಮ್ನೆಸ್ಟಿ ವಿವಾದ......
 
ನೈಟೆಡ್ ಥಿಯಾಲಾಜಿಕಲ್ ಕಾಲೇಜಿನಲ್ಲಿ ಅಮ್ನೆಸ್ಟಿ ಇಂಡಿಯಾ ಸಂಸ್ಥೆ ಸಂಸ್ಥೆ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಭಾರತೀಯ ಸೇನೆಯ ವಿರುದ್ಧ ಆಕ್ಷೇಪಾರ್ಹ ಘೋಷಣೆ ಕೂಗಿರುವುದನ್ನು ಖಂಡಿಸಿ ಅಗಸ್ಟ್ 29 ರಂದು ಶ್ರೀರಾಮ ಸೇನೆಯಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿವೆ ಎಂದು ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ಗೆ ಸಂಘ ಪರಿವಾರದ ನಾಯಕರಿಂದ ಗ್ರೀನ್ ಸಿಗ್ನಲ್!