Select Your Language

Notifications

webdunia
webdunia
webdunia
webdunia

ಸಿಎಂಗೆ ಅನಾರೋಗ್ಯ- ಇಂದಿನ ಕಾರ್ಯಕ್ರಮ ರದ್ದು

Sick to CM
bangalore , ಶನಿವಾರ, 8 ಜುಲೈ 2023 (14:33 IST)
ಸಿಎಂ ಸಿದ್ದರಾಮಯ್ಯಗೆ ಆರೋಗ್ಯ ಸಮಸ್ಯೆ ಹಿನ್ನೆಲೆ ಯಾರನ್ನೂ ಭೇಟಿ ಮಾಡುತ್ತಿಲ್ಲ. ಶೀತ ಮತ್ತು ಗಂಟಲು ನೋವಿನಿಂದ ಸಿಎಂ ಸಿದ್ದರಾಮಯ್ಯ ಬಳಲುತ್ತಿದ್ದಾರೆ. ಹೀಗಾಗಿ ಇಂದಿನ ಬಹುತೇಕ ಕಾರ್ಯಕ್ರಮ ರದ್ದಾಗಿದೆ. ಸಿಎಂರನ್ನು ಭೇಟಿ ಮಾಡಲು ಬಂದಿದ್ದ ಅಧಿಕಾರಿಗಳನ್ನೂ ಸಿಎಂ ಸಿದ್ದರಾಮಯ್ಯ ಭೇಟಿಯಾಗಿಲ್ಲ. ಈ ಹಿನ್ನೆಲೆ ಸಿಎಂ ನಿವಾಸಕ್ಕೆ ಆಗಮಿಸಿ ಕೆಲ ಕಾಲ ಕಾದು ಅಧಿಕಾರಿಗಳು ವಾಪಸ್ ಆಗಿದ್ದಾರೆ. ಸರ್ಕಾರಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಸಿಎಂ ಪ್ರಧಾನ ಕಾರ್ಯದರ್ಶಿ ರಜನೀಶ್ ಗೋಯಲ್, ಡಿಜಿಪಿ ಅಲೋಕ್ ಮೋಹನ್, ಇಂಟಲಿಜೆನ್ಸ್ ಎಡಿಜಿಪಿ ಶರತ್ ಚಂದ್ರ ವಾಪಸ್ ಆಗಿದ್ದಾರೆ. ಸಿಎಂ ಭೇಟಿ ಮಾಡಲು ಬಂದ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು, ವಾಣಿಜ್ಯ ಮಂಡಳಿ ಅಧ್ಯಕ್ಷ ಬಾಮಾ ಹರೀಶ್, ಸುಂದರ್ ರಾಜ್ ಸೇರಿದಂತೆ ಹಲವರು ವಾಪಸ್ ಆಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ತಾತ್ಕಾಲಿಕವಾಗಿ ಅಮರನಾಥ ಯಾತ್ರೆ ರದ್ದು!