ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ವಿಐಪಿ ಟ್ರೀಟ್ಮೆಂಟ್: ಮಾಧ್ಯಮಗಳ ಪ್ರಶ್ನೆಗೆ ಸಿಎಂ ಏನು ಹೇಳಿದ್ರು

Krishnaveni K
ಶನಿವಾರ, 8 ನವೆಂಬರ್ 2025 (13:33 IST)
ಬೆಂಗಳೂರು: ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಕೈದಿಗಳಿಗೆ ಈಗಲೂ ವಿಐಪಿ ಟ್ರೀಟ್ಮೆಂಟ್ ಮುಂದುವರಿದಿದೆ ಎಂದು ಬಯಲಾಗಿದೆ. ಇದರ ಬಗ್ಗೆ ಸಿಎಂ ಸಿದ್ದರಾಮಯ್ಯನವರನ್ನು ಮಾಧ್ಯಮಗಳು ಪ್ರಶ್ನಿಸಿದಾಗ ಅವರು ಏನು ಮಾಡಿದ್ರು ಗೊತ್ತಾ?

ಪರಪ್ಪನ ಅಗ್ರಹಾರ ಜೈಲಿನಲ್ಲಿ ಇಂತಹ ಅಕ್ರಮಗಳು ನಡೆಯುತ್ತಿರುವ ಬಗ್ಗೆ ಅನೇಕ ಬಾರಿ ಬಹಿರಂಗವಾಗಿದೆ. ಆಗೆಲ್ಲಾ ಸರ್ಕಾರ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡುತ್ತಲೇ ಇದೆ. ಹಲವು ಬಾರಿ ಹಿರಿಯ ಪೊಲೀಸ್ ಅಧಿಕಾರಿಗಳೂ ಜೈಲಿಗೆ ದಾಳಿ ನಡೆಸಿ ಪರಿಸ್ಥಿತಿ ಅವಲೋಕಿಸಿದ್ದೂ ಇದೆ.

ಆದರೂ ಪರಿಸ್ಥಿತಿ ಸುಧಾರಿಸಿಲ್ಲ. ಈಗ ಉಗ್ರರು, ರೌಡಿಗಳು ಜೈಲಿನೊಳಗೇ ವಿಐಪಿ ಟ್ರೀಟ್ಮೆಂಟ್ ಪಡೆಯುತ್ತಿರುವ ವಿಡಿಯೋಗಳು ಮತ್ತೆ ಬಹಿರಂಗವಾಗಿದೆ. ಈ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯನವರನ್ನು ಇಂದು ಮಾಧ್ಯಮಗಳು ಪ್ರಶ್ನಿಸಿವೆ. ಆದರೆ ಇದಕ್ಕೆ ಸಿಎಂ ಸ್ಪಷ್ಟ ಉತ್ತರ ನೀಡಲು ನಿರಾಕರಿಸಿದ್ದಾರೆ. ಈ ಬಗ್ಗೆ ನಾನು ಕೇಳಿ ಆಮೇಲೆ ಪ್ರತಿಕ್ರಿಯಿಸುವೆ ಎಂದು ಜಾರಿಕೊಂಡಿದ್ದಾರೆ.  ಇಂತಹ ಘಟನೆಗಳು ಪದೇ ಪದೇ ವರದಿಯಾಗುತ್ತಿರುವುದು ನೋಡಿದರೆ ಜೈಲಿನಲ್ಲಿ ಅಕ್ರಮಗಳಿಗೆ ತಡೆ ನೀಡುವವರೇ ಇಲ್ಲವೇನೋ ಎಂಬ ಅನುಮಾನ ಮೂಡುತ್ತಿದೆ. ಜೊತೆಗೆ ಜೈಲಿನ ಅಧಿಕಾರಿಗಳೇ ಇದಕ್ಕೆಲ್ಲಾ ಕುಮ್ಮಕ್ಕು ನೀಡುತ್ತಿದ್ದಾರೆಯೇ ಎಂಬ ಅನುಮಾನ ಮೂಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

ಮುಂದಿನ ಸುದ್ದಿ
Show comments