Publish Date: Mon, 28 Jan 2019 (18:47 IST)
Updated Date: Mon, 28 Jan 2019 (18:49 IST)
ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಒತ್ತಾಯಿಸಿ ಬಿಎಸ್ಪಿ ಪ್ರತಿಭಟನೆ ನಡೆಸಿತು.
ಚಾಮರಾಜನಗರದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದ ಬಿಎಸ್ಪಿ ಕಾರ್ಯಕರ್ತರು, ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ದ ದಿಕ್ಕಾರದ ಘೋಷಣೆ ಕೂಗಿದರು.
ಸಿದ್ದಗಂಗಾ ಶ್ರೀಗಳ ಭಾವಚಿತ್ರ ಹಿಡಿದು ರಾಷ್ಟ್ರೀಯ ಹೆದ್ದಾರಿ 209 ತಡೆದು ಪ್ರತಿಭಟಿಸಿದ ಬಹುಜನ ಸಮಾಜವಾದಿ ಪಕ್ಷದ ಕಾರ್ಯಕರ್ತರು. ಪ್ರಧಾನಿ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್ ರವರ Flex ಗಳನ್ನ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.