Publish Date: Thu, 21 Jun 2018 (10:12 IST)
Updated Date: Thu, 21 Jun 2018 (10:13 IST)
ಬೆಂಗಳೂರು: ಸಿದ್ಧಗಂಗಾ ಮಠದ ಶತಾಯುಷಿ ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಕೊಂಚ ಏರು ಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಂಗಳೂರಿನ ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಗೆ ಇಂದು ಬೆಳಿಗ್ಗೆ ಶ್ರೀಗಳನ್ನು ಕರೆದುಕೊಂಡು ಬರಲಾಗಿದೆ. ಸಾಮಾನ್ಯ ತಪಾಸಣೆಯ ಬಳಿಕ ಸಂಜೆ ಶ್ರೀಗಳು ಮಠಕ್ಕೆ ಮರಳಲಿದ್ದಾರೆ ಎಂದು ಕಿರಿಯ ಶ್ರೀಗಳು ಹೇಳಿಕೆ ನೀಡಿದ್ದಾರೆ.
ಅವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದೆಯಷ್ಟೇ. ಗಂಭೀರ ಸಮಸ್ಯೆಯೇನೂ ಇಲ್ಲ. ಭಕ್ತರು ಆತಂಕ ಪಡಬೇಕಾಗಿಲ್ಲ ಎಂದು ಕಿರಿಯ ಶ್ರೀಗಳು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.