Publish Date: Sat, 26 Jan 2019 (17:11 IST)
Updated Date: Sat, 26 Jan 2019 (17:12 IST)
ಅಗಲಿದ ಹಿರಿಯ ಚೇತನ, ನಡೆದಾಡುವ ದೇವರು ಡಾ. ಶಿವಕುಮಾರ ಸ್ವಾಮೀಜಿ ಅವರ ನೆನಪು ಜನಮಾನಸದಲ್ಲಿ ಉಳಿಯುವ ಯೋಜನೆಯೊಂದನ್ನು ಮುಂದಿನ ಬಜೆಟ್ನಲ್ಲಿ ಘೋಷಿಸಲು ಮುಖ್ಯಮಂತ್ರಿ ಸಮ್ಮತಿ ನೀಡಿದ್ದಾರೆ.
ಸಿದ್ದಗಂಗಾ ಶ್ರೀಗಳ ಹೆಸರಿನಲ್ಲಿ ಯೋಜನೆ ಶೀಘ್ರ ಜಾರಿಗೊಳಿಸಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ತುಮಕೂರು ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಹಿರಿಯ ಶ್ರೀಗಳಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದು, ಶ್ರೀಗಳ ಕುರಿತು ವಿಶೇಷ ಯೋಜನೆಯನ್ನು ಘೋಷಣೆ ಮಾಡುವ ಭರವಸೆ ತಮಗಿದೆ ಎಂದರು.
ನಡೆದಾಡುವ ದೇವರ ಪ್ರತಿಮೆ ನಿರ್ಮಾಣ ಮಾಡುವ ಸಂಬಂಧ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸುವುದಾಗಿ ಅವರು ಹೇಳಿದರು. ನಾಡಿನ ಇತಿಹಾಸದಲ್ಲಿ ಧಾರ್ಮಿಕ, ಶೈಕ್ಷಣಿಕ ಹಾಗೂ ಸಾರ್ವಜನಿಕ ಕ್ಷೇತ್ರದಲ್ಲಿ ಇಂತಹ ಮತ್ತೊಬ್ಬ ಶ್ರೀಗಳನ್ನು ನೋಡಲು ಸಾಧ್ಯವಿಲ್ಲ. ಅವರ ಕಾಲಘಟ್ಟದಲ್ಲಿ ನಾವೆಲ್ಲಾ ಬದುಕಿರೋದೇ ನಮ್ಮೆಲ್ಲರ ಅದೃಷ್ಟ ಎಂದರು.