Select Your Language

Notifications

webdunia
webdunia
webdunia
webdunia

ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ

ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ
Bangalore , ಶನಿವಾರ, 13 ಮೇ 2017 (08:36 IST)
ಬೆಂಗಳೂರು: ವಯೋಸಹಜ ಖಾಯಿಲೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ತುಮಕೂರು ಶ್ರೀ ಸಿದ್ಧಗಂಗಾ ಶ್ರೀ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.


 
ಮೂತ್ರಪಿಂಡ,  ಶ್ವಾಸಕೋಶ ಮತ್ತು ಜಠರ ಸೋಂಕಿನಿಂದಾಗಿ ಅಸ್ವಸ್ಥರಾಗಿದ್ದ ಶ್ರೀಗಳಿಗೆ ಮಠದಲ್ಲಿಯೇ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ನಂತರ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದೀಗ ಶ್ರಿಗಳಿಗೆ ಸ್ಟಂಟ್ ಅಳವಡಿಸಲಾಗಿದ್ದು, ಚಿಕಿತ್ಸೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಶ್ರೀಗಳ ಆರೋಗ್ಯದ ಬಗ್ಗೆ ವದಂತಿಗಳಿಗೆ ಕಿವಿಗೊಡಬೇಕಾಗಿಲ್ಲ. ಪೂರ್ಣವಾಗಿ ಗುಣಮುಖರಾದ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

Share this Story:

Follow Webdunia kannada

ಮುಂದಿನ ಸುದ್ದಿ

ಬ್ಯಾಂಕ್`ನಲ್ಲಿ ಹಣ ಸಾಗಿಸುವವರೇ 7.5 ಕೋಟಿ ಹಣದೊಂದಿಗೆ ಪರಾರಿಯಾದರು..!