ಸಿದ್ದಾಪುರ ಮಹೇಶ್ ಬರ್ಬರ ಹತ್ಯೆ ಕೇಸ್

Webdunia
ಶುಕ್ರವಾರ, 18 ಆಗಸ್ಟ್ 2023 (17:30 IST)
ಪರಪ್ಪನ ಅಗ್ರಹಾರ ಜೈಲಿನ ಬಳಿ ನಡೆದಿದ್ದ ರೌಡಿ ಶೀಟರ್ ಮಹೇಶ್ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳು ಕೋರ್ಟ್ಗೆ  ಶರಣಾಗಿದ್ದಾರೆ. ಕಳೆದ 15 ದಿನಗಳಿಂದ ತಲೆಮರೆಸಿಕೊಂಡಿದ್ದ ವಿಲ್ಸನ್ ಗಾರ್ಡನ್ ನಾಗ ಮತ್ತು ಡಬಲ್ ಮೀಟರ್ ಮೋಹನ್ 9ನೇ ಎಸಿಎಂಎಂ ಮುಂದೆ ಸರೆಂಡರ್ ಆಗಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ 17 ಮಂದಿ ಆರೋಪಿಗಳು ಅಂದರ್ ಆಗಿದ್ದು, ಈಗ ಪ್ರಮುಖ ಇಬ್ಬರು ಆರೋಪಿಗಳು ಕೂಡ ಪರಪ್ಪನ ಅಗ್ರಹಾರ ಠಾಣೆ ಪೊಲೀಸರಿಗೆ ಸಿಕ್ಕಿದ್ದು, ತನಿಖೆಗೆ ಚುರುಕು ಬರಲಿದೆ. 

ಕೋರ್ಟ್ ಮುಂದೆ ಶರಣಾಗಿದ್ದ ನಾಗ ಮತ್ತು ಮೋಹನ್ನನ್ನ ಮೊದಲಿಗೆ 10 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಆದರೆ ಈ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಪೊಲೀಸರು, ಕೊಲೆ ಕೇಸ್ ಸಂಬಂಧ ಆರೋಪಿಗಳ ವಿಚಾರಣೆ ಅಗತ್ಯವಿದ್ದು ತಮ್ಮ ಕಸ್ಟಡಿಗೆ ನೀಡಬೇಕೆಂದು ಕೋರ್ಟ್ನಲ್ಲಿ ಮನವಿ ಮಾಡಿದ್ರು. ಈ ಮನವಿಯನ್ನ ಪುರಸ್ಕರಿಸಿದ ನ್ಯಾಯಾಧೀಶರು ನಾಗ ಮತ್ತು ಮೋಹನ್ನನ್ನ 7 ದಿನ ಪರಪ್ಪನ ಅಗ್ರಹಾರ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ. 

ಇನ್ನು ಆರೋಪಿಗಳು ಕೋರ್ಟ್ಗೆ ಸೆರೆಂಡೆರ್ ಆಗ್ತಿದ್ದಂತೆ ಪೊಲೀಸರು ಅಲರ್ಟ್ ಆಗಿದ್ರು. ಇಬ್ಬರು ಎಸಿಪಿಗಳು ಸೇರಿದಂತೆ ಅಕ್ಕಪಕ್ಕದ ಠಾಣೆಯ ಇನ್ಸ್ಪೆಕ್ಟರ್ಗಳು, ಸಿಬ್ಬಂದಿಗಳು ಭದ್ರತೆ ಒದಗಿಸಿದ್ರು. ಕೊನೆಗೆ ಕೋರ್ಟ್ ಆದೇಶದ ಬಳಿಕ ಇಬ್ಬರು ಆರೋಪಿಗಳನ್ನ ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರ ಠಾಣೆಗೆ ಕರೆದೊಯ್ದರು. ಸದ್ಯ ಆರೋಪಿಗಳನ್ನ ವಶಕ್ಕೆ ಪಡೆದಿರೋ ಪೊಲೀಸರು ಕೊಲೆ ಕೇಸ್ ಸಂಬಂಧದ ತನಿಖೆಯನ್ನ ಮತ್ತಷ್ಟು ತೀವ್ರಗೊಳಿಸಲಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments