Select Your Language

Notifications

webdunia
webdunia
webdunia
webdunia

ಆಡಳಿತ ಪಕ್ಷದ ವಿರುದ್ಧ ಟ್ವೀಟರ್ ನಲ್ಲಿ ಕಿಡಿಕಾರಿದ ಸಿದ್ದರಾಮಯ್ಯ

ಆಡಳಿತ ಪಕ್ಷದ ವಿರುದ್ಧ  ಟ್ವೀಟರ್ ನಲ್ಲಿ ಕಿಡಿಕಾರಿದ ಸಿದ್ದರಾಮಯ್ಯ
ಬೆಂಗಳೂರು , ಶನಿವಾರ, 12 ಅಕ್ಟೋಬರ್ 2019 (12:27 IST)
ಬೆಂಗಳೂರು : ವಿಧಾನಸಭೆಯಲ್ಲಿ ಮಾಧ್ಯಮಗಳಿಗೆ ಸ್ಪೀಕರ್ ನಿರ್ಬಂಧ ಹೇರಿರುವ ಹಿನ್ನೆಲೆ, ವಿರೋಧ ಪಕ್ಷದವರ ಧ್ವನಿ ತಗ್ಗಿಸುವ ಕೆಲಸ ನಡೀತಾ ಇದೆ ಎಂದು ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.




ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ವಿಧಾನಸಭೆ ಕಲಾಪದಲ್ಲಿ ಆಡಳಿತ ಪಕ್ಷದ ಮಾತುಗಳನ್ನು ಡಿಡಿ ಚಂದನ ಸೆನ್ಸಾರ್ ಮಾಡಿ ಬಿತ್ತರಿಸುತ್ತಿದೆ. ಅಲ್ಲದೇ ಡಿಡಿ ಚಾನೆಲ್ ನಲ್ಲಿ ಆಡಳಿತ ಪಕ್ಷದವರ ಧ್ವನಿ ಮಾತ್ರ ಕೊಡುತ್ತಿದ್ದಾರೆ. ವಿರೋಧ ಪಕ್ಷದ ಸದಸ್ಯರು ಮಾತನಾಡುವಾಗ ಧ್ವನಿ ತಗ್ಗಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.


ಹಾಗೇ ವಿರೋಧಪಕ್ಷಗಳ ದನಿಯನ್ನು ದಮನಿಸಿ ಆಡಳಿತ ಪಕ್ಷಕ್ಕೆ ನೆರವಾಗುವ ಉದ್ದೇಶದಿಂದಲೇ ಸ್ಪೀಕರ್ ಅವರು ಟಿವಿ ಚಾನೆಲ್‍ಗಳ ನಿರ್ಬಂಧ ಹೇರಿರುವುದು ಕಳೆದೆರಡು ದಿನಗಳ ಕಲಾಪದಿಂದ ಸ್ಪಷ್ಟವಾಗಿದೆ ಎಂದು ಸ್ಪೀಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಸುಮಲತಾ ಹೆಸರೇಳಿಕೊಂಡು ರಾಜಕೀಯ ಮಾಡುವ ದುಸ್ಥಿತಿ ನಮಗೆ ಬಂದಿಲ್ಲ- ಶಿವರಾಮೇಗೌಡ ವಾಗ್ದಾಳಿ