ಬೆಳಗಾವಿ : ಬಿಜೆಪಿ ನಾಯಕರ ಔತಣಕೂಟದಲ್ಲಿ ಕಾಣಿಸಿಕೊಂಡಿದ್ದ ಸಚಿವ ರಮೇಶ ಜಾರಕಿಹೊಳಿ ಅವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರು ತರಾಟೆ ತೆಗೆದುಕೊಂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ನಗರದಲ್ಲಿ ಸರ್ಕಿಟ್ ಹೌಸ್‌ನಲ್ಲಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಕರೆಸಿಕೊಂಡು ಮಾತನಾಡಿಸಿದ ಸಿದ್ದರಾಮಯ್ಯ, ಬಿಜೆಪಿ ಪಾಳಯದಲ್ಲಿ ಗುರುತಿಸಿಕೊಳ್ಳದಂತೆ ಮತ್ತು ಅವರಿಂದ ಅಂತರ ಕಾಯ್ದುಕೊಳ್ಳುವಂತೆ ಎಚ್ಚರಿಕೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಕಾಂಗ್ರೆಸ್ ಜತೆಗೆ ಇರುವಂತೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ. ಇದಕ್ಕೆ ರಮೇಶ್ ಜಾರಕಿಹೊಳಿ ಸಿದ್ದರಾಮಯ್ಯ ಅವರ ಸಲಹೆಗಳನ್ನು ಪಾಲಿಸುವ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.