ಬೆಂಗಳೂರು: ಪೌರ ಕಾರ್ಮಿಕರಿಗೆ ವಿದೇಶ ಪ್ರವಾಸದ ಭಾಗ್ಯ ಕೊಡ್ತೀವಿ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದು ಇದಕ್ಕೆ ಪ್ರತಿಕ್ರಿಯಿಸಿರುವ ನೆಟ್ಟಿಗರು ಮೊದಲು ಅವರಿಗೆ ನೆಟ್ಟಗೆ ಸಂಬಳ ಕೊಡಿ ಎಂದು ಟಾಂಗ್ ಕೊಟ್ಟಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ಪ್ರತೀ ವರ್ಷ 1 ಸಾವಿರ ಪೌರ ಕಾರ್ಮಿಕರಿಗೆ ವಿದೇಶ ಪ್ರವಾಸ ಮಾಡಿಸುತ್ತೇವೆ ಎಂದು ಘೋಷಣೆ ಮಾಡಿದ್ದಾರೆ. ಪೌರ ಕಾರ್ಮಿಕರಿಗೆ ಮೇ 1 ರಿಂದ ಕೆಲಸ ಖಾಯಂ ಮಾಡಲಾಗುವುದು ಎಂದೂ ಈ ವೇಳೆ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಇದಕ್ಕೆ ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿದ್ದು ಮೊದಲು ಅವರಿಗೆ ಸರಿಯಾಗಿ ವೇತನ ಕೊಡಿ, ಅವರ ಜೀವನ ಗುಣಮಟ್ಟ ಸುಧಾರಿಸಲು ಅವಕಾಶ ಕೊಡಿ. ಉಚಿತ ಭಾಗ್ಯಗಳನ್ನು ಕೊಟ್ಟು ಏನು ಪ್ರಯೋಜನ ಎಂದು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ.
ಪೌರ ಕಾರ್ಮಿಕರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ ಮೇ 1 ರಿಂದ ಪೌರ ಕಾರ್ಮಿಕರ ಕೆಲಸ ಕಾಯಂ ಎಂದು ಘೋಷಿಸುವುದಾಗಿ ಹೇಳಿದ್ದಾರೆ. ಪೌರ ಕಾರ್ಮಿಕರ ಜೀವನ ಸುಧಾರಣೆಗೆ ಸರ್ಕಾರ ಬದ್ಧ ಎಂದಿದ್ದರು.