Publish Date: Wed, 16 Nov 2022 (10:43 IST)
Updated Date: Wed, 16 Nov 2022 (10:44 IST)
ಶಿವಮೊಗ್ಗ : ಸಿದ್ದರಾಮಯ್ಯ ಅವರ ಅವಧಿಯಲ್ಲಿ ರಾಜ್ಯ ಅಧೋಗತಿಗೆ ಹೋಯಿತು. ಅನ್ನಭಾಗ್ಯ ಕೊಡುತ್ತೇವೆ ಎಂದು ಹೇಳಿ ಕನ್ನ ಹಾಕಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿಯಲ್ಲಿ ನಡೆದ ಬಿಜೆಪಿ ಜನಸಂಕಲ್ಪ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು,
ಬಿಜೆಪಿಯವರು ಕೇವಲ ಮಾತನಾಡುತ್ತಾರೆ ಕೆಲಸ ಮಾಡೋದಿಲ್ಲ ಎಂದು ಕಾಂಗ್ರೆಸ್ ನವರು ಆರೋಪ ಮಾಡ್ತಾರೆ. ಬಿಜೆಪಿ ವಿರುದ್ಧ ಆರೋಪ ಮಾಡುವುದೇ ಅವರ ಕೆಲಸವಾಗಿದೆ ಎಂದಿದ್ದಾರೆ.