Webdunia - Bharat's app for daily news and videos

Install App

ಬಿಜೆಪಿಯವರು ಗ್ಯಾರಂಟಿ ಯೋಜನೆ ಪಡೆಯಲ್ವಾ, ಫ್ರೀ ಬಸ್ಸಲ್ಲಿ ಓಡಾಡಲ್ವಾ: ಸಿದ್ದರಾಮಯ್ಯ

Krishnaveni K
ಗುರುವಾರ, 14 ನವೆಂಬರ್ 2024 (09:45 IST)
ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆ ಬಗ್ಗೆ ಸದಾ ಟೀಕೆ ಮಾಡುವ ಬಿಜೆಪಿಯವರು ಗ್ಯಾರಂಟಿ ಯೋಜನೆಯ ಫಲಾನುಭವಿಗಳಲ್ವಾ? ಫ್ರೀ ಬಸ್ಸಲ್ಲಿ ಓಡಾಡಲ್ವಾ? ಹೀಗೆಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಟಿ ನರಸೀಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಅವರು ಬಿಜೆಪಿ ಮೇಲೆ ಟೀಕಾ ಪ್ರಹಾರ ನಡೆಸಿದ್ದಾರೆ. ಇತ್ತೀಚೆಗೆ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು ಕರ್ನಾಟಕದ ಗ್ಯಾರಂಟಿ ಯೋಜನೆ ಬಗ್ಗೆ ಟೀಕೆ ಮಾಡಿರುವುದನ್ನು ಉಲ್ಲೇಖಿಸಿ ಅವರು ತಿರುಗೇಟು ಕೊಟ್ಟಿದ್ದಾರೆ.

‘ಈ ಬಿಜೆಪಿಯವರಿಗೆ, ಗ್ಯಾರಂಟಿ ವಿರೋಧಿಗಳಿಗೆ ನಾನು ನೇರವಾಗಿ ಒಂದು ಪ್ರಶ್ನೆ ಕೇಳುತ್ತಿದ್ದೇನೆ. ರಾಜ್ಯದಲ್ಲಿರುವ ಬಿಜೆಪಿಯವರು ಗ್ಯಾರಂಟಿ ಯೋಜನೆಯ ಫಲಾನುಭವಿಗಳಲ್ಲವೇ? ಬಿಜೆಪಿಯವರು ಉಚಿತವಾಗಿ ಬಸ್ಸಲ್ಲಿ ಓಡಾಡುತ್ತಿಲ್ಲವೇ? ಉಚಿತವಾಗಿ ವಿದ್ಯುತ್ ಪಡೆಯುತ್ತಿಲ್ಲವೇ? ಬಿಜೆಪಿಯವರು ಗೃಹಲಕ್ಷ್ಮಿ ಹಣ ತೆಗೆದುಕೊಳ್ಳುತ್ತಿಲ್ಲವೇ? ಇಲ್ಲ ನಾವು ತೆಗೆದುಕೊಳ್ಳುತ್ತಿಲ್ಲ ಎಂದು ಎದೆ ಮುಟ್ಟಿಕೊಂಡು ಹೇಳಲಿ ನೋಡೋಣ.

ರಾಜ್ಯ ಬಿಜೆಪಿ ಕರ್ನಾಟಕದ ಗ್ಯಾರಂಟಿ ಫಲಾನುಭವಿಗಳನ್ನು ಅವಮಾನಿಸಿ, ಅಪಪ್ರಚಾರ ಮಾಡುವುದನ್ನು ನಿಲ್ಲಿಸದಿದ್ದರೆ ಕೋಟಿ ಕೋಟಿ ಫಲಾನುಭವಿಗಳು ನಿಮಗೆ ತಕ್ಕ ಪಾಠ ಕಲಿಸುತ್ತಾರೆ’ ಎಂದು ಸಿಎಂ ಸಿದ್ದರಾಮಯ್ಯ ವಾಕ್ಪ್ರಹಾರ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮ್ಮ-ಅಪ್ಪನನ್ನು ಒಂಟಿಯಾಗಿ ಬಿಡಬೇಡ, ಸಾವಿಗೂ ಮುನ್ನಾ ಸಹೋದರಿಗೆ ಸಂದೇಶ ಕಳುಹಿಸಿದ ಸಹೋದರ

ಬಿ ನಾಗೇಂದ್ರ ರಾಜೀನಾಮೆ: ಸಮಗ್ರ ದಲಿತ ಸಮುದಾಯಕ್ಕೆ ಸಿಕ್ಕ ಗೆಲುವು: ಆರ್‌ ಅಶೋಕ್‌

ಕಾಸರಗೋಡಿನಲ್ಲಿ ಓಣಂ ಆಚರಣೆಯ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ನೀವು ಕೆಲಸ ಮಾಡೋದು MLAಗಾಗಿನಾ, ಜನರಿಗಾಗಿನಾ: ಅಧಿಕಾರಿಗೆ ಹೆಚ್‌ಡಿ ಕುಮಾರಸ್ವಾಮಿ ತರಾಟೆ, Video

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments