Webdunia - Bharat's app for daily news and videos

Install App

ಯಾವ ನಾಲಗೆಯಲ್ಲಿ ನನ್ನ ರಾಜೀನಾಮೆ ಕೇಳ್ತಿದ್ದೀರಿ: ಆರ್ ಅಶೋಕ್ ಗೆ ತಿರುಗೇಟು ಕೊಟ್ಟ ಸಿದ್ದರಾಮಯ್ಯ

Krishnaveni K
ಸೋಮವಾರ, 19 ಆಗಸ್ಟ್ 2024 (13:46 IST)
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿರುವ ವಿಪಕ್ಷ ನಾಯಕ ಆರ್ ಅಶೋಕ್ ವಿರುದ್ಧ ವಾಗ್ದಾಳಿ ನಡೆಸಿರುವ ಸಿಎಂ ಸಿದ್ದರಾಮಯ್ಯ ಯಾವ ನಾಲಗೆ ಇಟ್ಟುಕೊಂಡು ಈಗ ನನ್ನ ಬಳಿ ರಾಜೀನಾಮೆ ಕೇಳ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ.

ಮುಡಾ ಹಗರಣದ ಬಗ್ಗೆ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬೆನ್ನಲ್ಲೇ ಆರ್ ಅಶೋಕ್ ನೇತೃತ್ವದಲ್ಲಿ ಸಿಎಂ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಅಲ್ಲದೆ, ಟ್ವೀಟ್ ಮೂಲಕವೂ ಆರ್ ಅಶೋಕ್ ಈ ಹಿಂದಿನ ಘಟನೆಯನ್ನು ಉಲ್ಲೇಖಿಸಿ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ.

ಈ ಹಿಂದೆ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಆಗಿನ ರಾಜ್ಯಪಾಲರಾಗಿದ್ದ ಹಂಸರಾಜ್ ಭಾರದ್ವಾಜ್ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಾಗ ಅವರು ರಾಜೀನಾಮೆ ನೀಡಿರುವ ವಿಚಾರವನ್ನು ಪ್ರಸ್ತಾಪಿಸಿದ್ದ ಅಶೋಕ್ ಈಗ ಸಿದ್ದರಾಮಯ್ಯ ಯಾಕೆ ರಾಜೀನಾಮೆ ನೀಡುತ್ತಿಲ್ಲ ಎಂದಿದ್ದಾರೆ.

ಇದಕ್ಕೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ಇಂತಹ ಹೇಳಿಕೆ ನೀಡುವ ಮೂಲಕ ಅಶೋಕ್ ತಮ್ಮ ಅಜ್ಞಾನ ಪ್ರದರ್ಶಿಸಿದ್ದಾರೆ. ಹಿಂದೆ ಯಡಿಯೂರಪ್ಪನವರು ಯಾಕೆ ರಾಜೀನಾಮೆ ನೀಡಬೇಕು ಎಂದು ಪ್ರಶ್ನಿಸಿದ ಇದೇ ಅಶೋಕ್ ಈಗ ಯಾವ ನಾಲಿಗೆ ಇಟ್ಟುಕೊಂಡು ನನ್ನ ರಾಜೀನಾಮೆ ಕೇಳ್ತಿದ್ದೀರಿ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಅಶೋಕ್ ಸ್ವಲ್ಪ ವಾಸ್ತವಾಂಶ ತಿಳಿದುಕೊಂಡು ಮಾತನಾಡಲಿ. ಹಿಂದೆ ಯಡಿಯೂರಪ್ಪನವರು ರಾಜೀನಾಮೆ ನೀಡಿದ್ದು 2011 ರ ಆಗಸ್ಟ್ 4 ರಂದು. ಆಗ ಲೋಕಾಯುಕ್ತ ಸಂತೋಷ್ ಹೆಗ್ಡೆ ಅಕ್ರಮ ಗಣಿಗಾರಿಕೆಯಿಂದ ರಾಜ್ಯದ ಬೊಕ್ಕಸಕ್ಕೆ ಸಾವಿರಾರು ಕೋಟಿ ರೂ. ನಷ್ಟವಾಗಿದೆ ಎಂದು ವರದಿ ಕೊಟ್ಟ ಬಳಿಕ ಯಡಿಯೂರಪ್ಪನವರು ರಾಜೀನಾಮೆ ನೀಡಿದ್ದರು. ಆಗ ಆರೋಪ ಪಟ್ಟಿ ಸಲ್ಲಿಸಿದ್ದ ಸಂತೋಷ್ ಹೆಗ್ಡೆಯವರು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಕ್ರಮ ಸರಿಯಾಗಿತ್ತು ಎಂದಿದ್ದರು. ಆಗ ನೀವೆಲ್ಲರೂ ಸೇರಿ ಯಡಿಯೂರಪ್ಪ ವಿರುದ್ಧ ಏನೆಲ್ಲಾ ಕುತಂತ್ರ ಮಾಡಿದಿರಿ ಎಂದು ಗೊತ್ತಿದೆ ಎಂದಿದ್ದಾರೆ. ಅವರ ಟ್ವೀಟ್ ಇಲ್ಲಿದೆ ನೋಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments