ಬೆಂಗಳೂರು: ಹೆಚ್ಚು ಮಕ್ಕಳನ್ನು ಮಾಡಿಕೊಳ್ಳಬೇಡಿ, ಜನ ಸಂಖ್ಯೆ ನಿಯಂತ್ರಣ ಅಗತ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ಈಗ ಭಾರೀ ಚರ್ಚೆಗೆ ಕಾರಣವಾಗಿದೆ.
ನವಲಗುಂದದಲ್ಲಿ ಆಯೋಜಿಸಿದ್ದ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ ದಂಪತಿಗಳಿಗೆ ಈ ಕಿವಿ ಮಾತು ಹೇಳಿದ್ದಾರೆ. ಆದರೆ ಅವರ ಹೇಳಿಕೆಗೆ ಸಾರ್ವಜನಿಕರಿಂದ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದೆ.
ನಮ್ಮ ದೇಶದಲ್ಲಿ ಜನಸಂಖ್ಯೆಯೇ ದೊಡ್ಡ ಸಮಸ್ಯೆ. ಹೀಗಾಗಿ ದಂಪತಿಗಳು ಒಂದು ಅಥವಾ ಎರಡು ಅದಕ್ಕಿಂತ ಹೆಚ್ಚು ಮಕ್ಕಳನ್ನು ಮಾಡಿಕೊಳ್ಳಬಾರದು ಎಂದಿದ್ದಾರೆ. ಸಮಾಜದಲ್ಲಿ ಜಾತಿ ವ್ಯವಸ್ಥೆ ಹೋಗಬೇಕೆಂದರೆ ಅಂತರ್ಜಾತಿ ವಿವಾಹಗಳು ಹೆಚ್ಚಾಗಬೇಕು. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಜೈನರು ಎಲ್ಲಾ ಧರ್ಮದವರೂ ಮನುಷ್ಯರೇ. ನಾವು ಮನಷ್ಯರ ರೀತಿಯಲ್ಲೇ ಬದುಕಬೇಕು ಎಂದಿದ್ದರು. ಇನ್ನು ಕೆಲವರು ಮೊದಲು ನಿಮ್ಮ ಮಕ್ಕಳಿಗೆ ಬಡ, ದಲಿತರ ಜೊತೆ ಮದುವೆ ಮಾಡಿಸ್ತೀರಾ ಎಂದು ಸವಾಲು ಹಾಕಿದ್ದಾರೆ.