ಬೆಂಗಳೂರು: ಈಚೆಗೆ ಸಿಎಂ ನಿವಾಸದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಒಟ್ಟಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆದ ಬೆನ್ನಲ್ಲೇ ಇದೀಗ ಇವರಿಬ್ಬರ ಮಧ್ಯೆ ಮತ್ತೊಂದು ಬ್ರೇಕ್‌ಫಾಸ್ಟ್ ಮೀಟಿಂಗ್ ನಡೆಯಲಿದೆ.
ಸದ್ಯ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ನೀಡಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರನ್ನು ಡಿಕೆ ಶಿವಕುಮಾರ್ ಅವರು ಬ್ರೇಕ್‌ಫಾಸ್ಟ್ ಮೀಟಿಂಗ್‌ಗೆ ಆಹ್ವಾನಿಸಿದ್ದಾರೆ.
ನಾಳೆ ಬೆಳಗ್ಗೆ 9:30ಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಸದಾಶಿವನಗರದಲ್ಲಿರುವ ನಿವಾಸದಲ್ಲಿ ಸಿದ್ದರಾಮಯ್ಯನವರಿಗೆ ಉಪಹಾರ ಆತಿಥ್ಯ ಆಯೋಜಿಸಲಾಗಿದೆ.
ಇನ್ನೂ ಈ ಹಿಂದೆಯೂ ಹೈಕಮಾಂಡ್ ಸೂಚನೆಯಂತೆ ಸಿಎಂ ನಿವಾಸದಲ್ಲಿ ಸಿದ್ದು ಹಾಗೂ ಡಿಕೆಶಿ ಮುಖಾಮುಖಿಯಾಗಿದ್ದರು. ಇದೀಗ ನಾಳೆ ನಡೆಯುವ ಮೀಟಿಂಗ್ ಕೂಡಾ ಅದರ ಮುಂದುವರೆದ ಭಾಗ ಎನ್ನಲಾಗಿದೆ.
ಕಳೆದ ಶನಿವಾರ ಸಿಎಂ ನಿವಾಸದಲ್ಲಿ ಡಿಸಿಎಂಗೆ ಬ್ರೇಕ್‌ಫಾಸ್ಟ್ ಆಯೋಜನೆ ಮಾಡಲಾಗಿತ್ತು. ಅಂದೇ ಸಿಎಂಗೂ ತಮ್ಮ ಮನೆಗೆ ಬ್ರೇಕ್‌ಫಾಸ್ಟ್‌ಗೆ ಬರುವಂತೆ ಡಿಕೆಶಿ ಆಹ್ವಾನಿಸಿದ್ದರು. ಹೀಗಾಗಿ ನಾಳೆ ಸಿಎಂಗೆ ಡಿಸಿಎಂ ಬ್ರೇಕ್‌ಫಾಸ್ಟ್ ಆತಿಥ್ಯ ಇರಲಿದ್ದು, ಸಹಜವಾಗಿ ರಾಜಕೀಯ ಕುತೂಹಲ ಮೂಡಿಸಿದೆ
ಇದೀಗ ಡಿಕೆಶಿ ಅವರು ಸಿದ್ದರಾಮಯ್ಯಗೆ ನಾಟಿ ಕೋಳಿ ಇಷ್ಟ ಎನ್ನುವ ಕಾರಣಕ್ಕೆ ಬೆಳಗ್ಗಿನ ತಿಂಡಿಗೆ ನಾಟಿ ಕೋಳಿ ಸಾರಿನ ಆತಿಥ್ಯ ನೀಡಲು ಡಿಕೆಶಿ ಮುಂದಾಗಿದ್ದಾರೆ. ಬೆಳಗ್ಗೆ ತಿಂಡಿಗೆ ಇಡ್ಲಿ ನಾಟಿ ಕೋಳಿ ಸಾರು ಹಾಗೂ ನಾಟಿಕೋಳಿ ಫ್ರೈ ಸ್ಪೆಷಲ್ ಮೆನು ಸಿದ್ಧಪಡಿಸಲಾಗಿದೆ. ಡಿಕೆಶಿಯ ಸರ್ಕಾರಿ ನಿವಾಸದಲ್ಲಿ ಸಾಕಿದ್ದ ಕನಕಪುರದ ನಾಟಿ ಕೋಳಿಯನ್ನೇ ಸಿಎಂಗೆ ಉಣಬಡಿಸಲಾಗುತ್ತದೆ.