ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

Sampriya
ಸೋಮವಾರ, 1 ಡಿಸೆಂಬರ್ 2025 (20:18 IST)
ಬೆಂಗಳೂರು: ಈಚೆಗೆ ಸಿಎಂ ನಿವಾಸದಲ್ಲಿ  ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಒಟ್ಟಿಗೆ ಬ್ರೇಕ್ ಫಾಸ್ಟ್ ಮೀಟಿಂಗ್  ನಡೆದ ಬೆನ್ನಲ್ಲೇ ಇದೀಗ ಇವರಿಬ್ಬರ ಮಧ್ಯೆ ಮತ್ತೊಂದು ಬ್ರೇಕ್‌ಫಾಸ್ಟ್  ಮೀಟಿಂಗ್ ನಡೆಯಲಿದೆ. 

ಸದ್ಯ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ನೀಡಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರನ್ನು ಡಿಕೆ ಶಿವಕುಮಾರ್ ಅವರು ಬ್ರೇಕ್‌ಫಾಸ್ಟ್‌ ಮೀಟಿಂಗ್‌ಗೆ ಆಹ್ವಾನಿಸಿದ್ದಾರೆ. 

ನಾಳೆ ಬೆಳಗ್ಗೆ 9:30ಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಅವರ ಸದಾಶಿವನಗರದಲ್ಲಿರುವ ನಿವಾಸದಲ್ಲಿ ಸಿದ್ದರಾಮಯ್ಯನವರಿಗೆ ಉಪಹಾರ ಆತಿಥ್ಯ ಆಯೋಜಿಸಲಾಗಿದೆ.

ಇನ್ನೂ ಈ ಹಿಂದೆಯೂ ಹೈಕಮಾಂಡ್ ಸೂಚನೆಯಂತೆ ಸಿಎಂ ನಿವಾಸದಲ್ಲಿ ಸಿದ್ದು ಹಾಗೂ ಡಿಕೆಶಿ ಮುಖಾಮುಖಿಯಾಗಿದ್ದರು. ಇದೀಗ ನಾಳೆ ನಡೆಯುವ ಮೀಟಿಂಗ್ ಕೂಡಾ ಅದರ ಮುಂದುವರೆದ ಭಾಗ ಎನ್ನಲಾಗಿದೆ. 

ಕಳೆದ ಶನಿವಾರ ಸಿಎಂ ನಿವಾಸದಲ್ಲಿ ಡಿಸಿಎಂಗೆ ಬ್ರೇಕ್‌ಫಾಸ್ಟ್ ಆಯೋಜನೆ ಮಾಡಲಾಗಿತ್ತು. ಅಂದೇ ಸಿಎಂಗೂ ತಮ್ಮ ಮನೆಗೆ ಬ್ರೇಕ್‌ಫಾಸ್ಟ್‌ಗೆ ಬರುವಂತೆ ಡಿಕೆಶಿ ಆಹ್ವಾನಿಸಿದ್ದರು. ಹೀಗಾಗಿ ನಾಳೆ ಸಿಎಂಗೆ ಡಿಸಿಎಂ ಬ್ರೇಕ್‌ಫಾಸ್ಟ್ ಆತಿಥ್ಯ ಇರಲಿದ್ದು, ಸಹಜವಾಗಿ ರಾಜಕೀಯ ಕುತೂಹಲ ಮೂಡಿಸಿದೆ

ಇದೀಗ ಡಿಕೆಶಿ ಅವರು ಸಿದ್ದರಾಮಯ್ಯಗೆ ನಾಟಿ ಕೋಳಿ ಇಷ್ಟ ಎನ್ನುವ ಕಾರಣಕ್ಕೆ ಬೆಳಗ್ಗಿನ ತಿಂಡಿಗೆ ನಾಟಿ‌ ಕೋಳಿ ಸಾರಿನ ಆತಿಥ್ಯ ನೀಡಲು ಡಿಕೆಶಿ ಮುಂದಾಗಿದ್ದಾರೆ. ಬೆಳಗ್ಗೆ ತಿಂಡಿಗೆ ಇಡ್ಲಿ ನಾಟಿ ಕೋಳಿ ಸಾರು ಹಾಗೂ ನಾಟಿಕೋಳಿ ಫ್ರೈ ಸ್ಪೆಷಲ್ ಮೆನು ಸಿದ್ಧಪಡಿಸಲಾಗಿದೆ. ಡಿಕೆಶಿಯ ಸರ್ಕಾರಿ ನಿವಾಸದಲ್ಲಿ ಸಾಕಿದ್ದ ಕನಕಪುರದ ನಾಟಿ‌ ಕೋಳಿಯನ್ನೇ ಸಿಎಂಗೆ ಉಣಬಡಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಸಿಎಂ ಕುರ್ಚಿ ಕಿತ್ತಾಟಕ್ಕೆ ಬ್ರೇಕ್ ಬೆನ್ನಲ್ಲೇ ಸಚಿವ ಮಹದೇವಪ್ಪ ಹೊಸ ಬಾಂಬ್

ರಾಹುಲ್ ಗಾಂಧಿಗೆ ಚಿತ್ರಹಿಂಸೆ ನೀಡಲು ಬಿಜೆಪಿಯಿಂದ ತನಿಖಾ ಸಂಸ್ಥೆ ದುರ್ಬಳಕೆ: ಶಿವಕುಮಾರ್

ಯಾರು ಕಚ್ಚಬಲ್ಲರೋ ಅವರು ಸರ್ಕಾರವನ್ನು ನಡೆಸುತ್ತಿದ್ದಾರೆ: ರೇಣುಕಾ ಚೌಧರಿ

ರಾಹುಲ್, ಸೋನಿಯಾ ವಿರುದ್ಧ ಎಫ್‌ಐಆರ್‌: ಬಿಜೆಪಿಯಿಂದ ದ್ವೇಷ ರಾಜಕಾರಣ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments