Select Your Language

Notifications

webdunia
webdunia
webdunia
webdunia

ಜಿಲೇಬಿ ವಿರೋಧಿ ಆರೋಪಕ್ಕೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ.

ಜಿಲೇಬಿ ವಿರೋಧಿ ಆರೋಪಕ್ಕೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ.
ಬೆಂಗಳೂರು , ಶುಕ್ರವಾರ, 12 ಮೇ 2017 (16:23 IST)
ಗೌಡ, ಲಿಂಗಾಯತ, ಬ್ರಾಹ್ಮಣ ಸಮುದಾಯಗಳ ಬಗ್ಗೆ ನನಗೆ ಯಾವುದೇ ವಿರೋಧವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸರ್ಕಾರದ ಎಲ್ಲ ಕಾರ್ಯಕ್ರಮಗಳು ಈ ಸಮುದಾಯಗಳಿಗೆ ತಲುಪಿವೆ. ವಿಧಾನಸಭೆಯಲ್ಲಿ ಶೆಟ್ಟರ್ ಮಾಡಿದ ಜಿಲೇಬಿ ಮಾಡಿದ ಆರೋಪ ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 

ಸರ್ಕಾರಕ್ಕೆ 4 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಬಿಜೆಪಿ ಸರ್ಕಾರದ ಻ವಧಿಯಲ್ಲಿ ಕೊಲೆ ಮತ್ತು ಅಪರಾಧ ಪ್ರಕರಣಗಳು ಹೆಚ್ಚಾಗಿದ್ದು, ನಮ್ಮ ಸರ್ಕಾರದ ಅವಧಿಯಲ್ಲಿ ನಿಯಂತ್ರಣಕ್ಕೆ ಬಂದಿದೆ ಎಂದು ಸಿದ್ದರಾಮಯ್ಯ ಅಂಕಿ ಅಂಶಗಳನ್ನ ಮುಂದಿಟ್ಟಿದ್ದಾರೆ.

ಇದೇವೇಳೆ, ಸರ್ಕಾರದ ವಿರುದ್ಧ ಬಿಜೆಪಿ ರಿಲೀಸ್ ಮಾಡಿರುವ ಚಾರ್ಜ್ ಶೀಟ್ ಸುಳ್ಳಿನ ಕಂತೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಜೈಲಿಗೆ ಹೋಗಿಬಂದು ಪೊಲೀಸರಿಂದ ಹತ್ತಾರು ಕೇಸ್, ಚಾರ್ಜ್ ಶೀಟ್ ಹಾಕಿಸಿಕೊಂಡು ಜಾಮೀನು ಪಡೆದು ಓಡಾಡುತ್ತಿರುವ ಯಡಿಯೂರಪ್ಪ ಮತ್ತು ಬಿಜೆಪಿ ನಾಯಕರಿಗೆ ನಮ್ಮ ವಿರುದ್ಧ ಮಾತನಾಡುವ ನೈತಿಕತೆ ಇಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕಂಠಪೂರ್ತಿ ಕುಡಿದಿದ್ದ ವರ ಮದುವೆ ಮೆರವಣಿಗೆಯಲ್ಲೇ ಮೃತಪಟ್ಟ..!