ಬಾದಾಮಿಯಿಂದ ಸಿದ್ದರಾಮಯ್ಯ ಸ್ಪರ್ಧೆ?

Webdunia
ಗುರುವಾರ, 23 ಮಾರ್ಚ್ 2023 (14:12 IST)
ಬೆಂಗಳೂರು : ಈ ಬಾರಿಯ ವಿಧಾನಸಭಾ ಚುನಾವಣೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರ ಹಾಗೂ ವರುಣಾ ಕ್ಷೇತ್ರಗಳ ಪೈಕಿ ಎಲ್ಲಿ ಸ್ಪರ್ಧೆಗೆ ನಿಲ್ಲುತ್ತಾರೆ ಎಂಬುದು ಭಾರೀ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಆದರೆ ಇದರ ಬೆನ್ನಲ್ಲೆ ಸಿದ್ದರಾಮಯ್ಯ ಈ ಎರಡೂ ಕ್ಷೇತ್ರಗಳನ್ನು ಪಕ್ಕಕ್ಕಿಟ್ಟು ಈಗ ಬಾದಾಮಿಯಲ್ಲಿ ಸ್ಪರ್ಧೆ ಮಾಡುತ್ತಾರಾ ಎಂಬ ಪ್ರಶ್ನೆ ಎದ್ದಿದೆ.
 
ಕೋಲಾರ ಹಾಗೂ ವರುಣಾ ಕ್ಷೇತ್ರಗಳಲ್ಲಿ ಗೊಂದಲವಿರುವ ನಡುವೆಯೇ ಸಿದ್ದರಾಮಯ್ಯ ಇದೀಗ ಬಾದಾಮಿ ಪ್ರವಾಸಕ್ಕೆ ಮುಂದಾಗುತ್ತಿದ್ದಾರೆ. ಶುಕ್ರವಾರ ಬಾದಾಮಿಗೆ ತೆರಳಲಿರುವ ಸಿದ್ದರಾಮಯ್ಯ ಅಲ್ಲಿ 500 ಕೋಟಿ ರೂ. ವೆಚ್ಚದ ಬಾದಾಮಿ-ಕೆರೂರು ಶಾಶ್ವತ ಕುಡಿಯವ ನೀರು ಸರಬರಾಜು ಯೋಜನೆಗೆ ಚಾಲನೆ ನೀಡಲಿದ್ದಾರೆ.

ಸ್ವಕ್ಷೇತ್ರದಲ್ಲಿ ನಡೆಯಲಿರಯವ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಬಾಗಿಯಾಗುವುದರಲ್ಲಿ ಯಾವುದೇ ವಿಶೇಷ ಇಲ್ಲ. ಆದರೆ ಈ ಕಾರ್ಯಕ್ರಮದ ಬಳಿಕ ರೋಡ್ ಶೋ ನಡೆಸಲಿದ್ದಾರೆ. ಈ ರೋಡ್ ಶೋ ನಡೆಸಲಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದ್ದಾರಾ ಎಂಬ ಪ್ರಶ್ನೆ ಎದ್ದಿದೆ. ಭರ್ಜರಿ ರೋಡ್ ಶೋಗೆ ಸಿದ್ಧತೆಗಳನ್ನು ಮಾಡಲಾಗಿದ್ದು, ಸಿದ್ದರಾಮಯ್ಯ ಅವರ ಈ ನಡೆ ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸುತ್ತಿದೆ. 

ಬಾದಾಮಿ ನಗರದ ರಾಮದುರ್ಗ ಕ್ರಾಸ್ನಿಂದ ಎಪಿಎಂಸಿ ಆವರಣದ ವರೆಗೆ ರೋಡ್ ಶೋ ನಡೆಸಲಿದ್ದಾರೆ. ಸಿದ್ದರಾಮಯ್ಯನವರ ಈ ನಡೆಯಿಂದ ಪರೋಕ್ಷವಾಗಿ ಬಾದಾಮಿ ಮತದಾರರ ಮನಸ್ಥಿತಿ ಅಳೆಯಲು ಅವರು ಮುಂದಾಗಿದ್ದಾರಾ ಎಂಬ ಪ್ರಶ್ನೆ ಮೂಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರಿಗೆ ನೌಕರರ ಮುಖಂಡ, ಹಿರಿಯ ಹೋರಾಟಗಾರ ಅನಂತ ಸುಬ್ಬರಾವ್ ಇನ್ನಿಲ್ಲ

ಅಂಬರೀಶ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ರಾ ಕೈ ನಾಯಕ ಶಿವರಾಮೇಗೌಡ: ವೈರಲ್ ಅಡಿಯೋದಲ್ಲಿ ಏನಿದೆ

ಮುಡಾ ಹಗರಃಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

ಅಜಿತ್ ಪವಾರ್ ಇದ್ದ ವಿಮಾನದಲ್ಲಿ ಕೊನೆ ಕ್ಷಣದಲ್ಲಿ ಏನೆಲ್ಲಾ ಆಯ್ತು, ಪೈಲೆಟ್ ಹೇಳಿದ್ದೇನು ಇಲ್ಲಿದೆ ಮಾಹಿತಿ

ಜಯನಗರ ವಿಧಾನಸಭೆ ಕ್ಷೇತ್ರದ ಫಲಿತಾಂಶ ವಿವಾದ: ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಸುಪ್ರೀಂಕೋರ್ಟ್

ಮುಂದಿನ ಸುದ್ದಿ
Show comments