Publish Date: Tue, 29 Oct 2019 (11:57 IST)
Updated Date: Tue, 29 Oct 2019 (11:59 IST)
ಬೆಂಗಳೂರು : ರಾಜ್ಯ ಸರ್ಕಾರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಬಿಡುಗಡೆ ಮಾಡಿದ್ದು, ಇದೀಗ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.
ನವೆಂಬರ್ 1 ರ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಸಾಹಿತ್ಯ, ಕಲೆ, ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 64 ಸಾಧಕರಿಗೆ 2019ರ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತಿದೆ. ಸೋಮವಾರ ಸಚಿವ ಸಿಟಿ ರವಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.
ಇದೀಗ ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಸಲ್ಲಿಸಿದ್ದಾರೆ.