Publish Date: Sat, 27 Dec 2025 (20:26 IST)
Updated Date: Sat, 27 Dec 2025 (20:28 IST)
ಬೆಂಗಳೂರು: ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಭಾಗಿಯಾಗಲು ದೆಹಲಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಅಂದುಕೊಂಡಿದ್ದೇ ಒಂದು ಆಗಿದ್ದೇ ಬೇರೆ ಎಂಬಂತಾಗಿದೆ.
ದೆಹಲಿಯಲ್ಲಿ ಇಂದು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಸೇರಿದಂತೆ ಕಾಂಗ್ರೆಸ್ ನ ಘಟಾನುಘಟಿ ನಾಯಕರನ್ನು ಸಿಎಂ ಭೇಟಿ ಮಾಡಿದ್ದಾರೆ. ಈ ವೇಳೆ ರಾಜ್ಯದ ಕುರ್ಚಿ ಕದನದ ಬಗ್ಗೆ ಚರ್ಚಿಸಬಹುದು ಎಂದು ಎಲ್ಲರ ನಿರೀಕ್ಷೆಯಾಗಿತ್ತು.
ಸ್ವತಃ ಸಿದ್ದರಾಮಯ್ಯ ಕೂಡಾ ಇಂದು ಕುರ್ಚಿ ವಿಚಾರವಾಗಿ ಹೈಕಮಾಂಡ್ ಜೊತೆ ಚರ್ಚಿಸಲು ಬಯಸಿದ್ದರು. ಹೀಗಾಗಿ ಕಾರ್ಯಕಾರಿ ಸಮಿತಿ ಸಭೆಯ ನಡುವೆ ಕೆಸಿ ವೇಣುಗೋಪಾಲ್ ಬಳಿ ಈ ವಿಚಾರವಾಗಿ ಮಾತನಾಡಲು ಪ್ರಯತ್ನಿಸಿದ್ದಾರೆ. ಆದರೆ ಈಗ ಬೇಡ, ಜನವರಿಯಲ್ಲಿ ಚರ್ಚಿಸೋಣ ಎಂಬ ಸಂದೇಶ ನೀಡಿದ್ದಾರೆ ಎನ್ನಲಾಗಿದೆ. ಇನ್ನು, ರಾಹುಲ್ ಗಾಂಧಿ ಬಳಿ ಈ ವಿಚಾರವಾಗಿ ಮಾತನಾಡಲೂ ಅವಕಾಶ ಸಿಕ್ಕಿಲ್ಲ ಎನ್ನಲಾಗಿದೆ. ಈ ಮೂಲಕ ಅಂದುಕೊಂಡಿದ್ದೇ ಒಂದು ಆಗಿದ್ದೇ ಬೇರೆ ಎಂಬಂತಾಗಿದೆ.