Webdunia - Bharat's app for daily news and videos

Install App

ಸಾಮಾನ್ಯರು ಸಂಚರಿಸುವ ರೈಲು ಪ್ರಯಾಣ ದರ ಏರಿಸಿದ್ದು ಸರಿಯಲ್ಲ: ಸಿದ್ದರಾಮಯ್ಯ

Krishnaveni K
ಬುಧವಾರ, 2 ಜುಲೈ 2025 (09:44 IST)
ಬೆಂಗಳೂರು: ಸಾಮಾನ್ಯ ಜನರ ಸಾರಿಗೆಯಾಗಿಯೇ ಜನಪ್ರಿಯವಾಗಿರುವ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೂಲಕ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ದೇಶದ ಕೋಟ್ಯಂತರ ಮಧ್ಯಮ ಮತ್ತು ಬಡವರ್ಗದ ಬದುಕಿನ ಮೇಲೆ ಬರೆ ಎಳೆದಿದೆ. ಈ ಬೆಲೆ ಏರಿಕೆಯನ್ನು ತಕ್ಷಣ ಹಿಂದೆಗೆದುಕೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಇಂದಿನಿಂದ ರೈಲು ಪ್ರಯಾಣ ದರ ಪ್ರತೀ ಕಿ.ಮೀ.ಗೆ 1 ಪೈಸೆಯಷ್ಟು ಹೆಚ್ಚಳ ಮಾಡಲಾಗಿದೆ. ಇದರ ವಿರುದ್ಧ ಸಿಎಂ ಟ್ವೀಟ್ ಮಾಡಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ ಏರುತ್ತಲೇ ಇರುವ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ದರಗಳ ಭಾರದಿಂದ ಜನರು ಈಗಾಗಲೇ ತತ್ತರಿಸಿಹೋಗಿದ್ದಾರೆ. ಹಾಲು, ಮೊಸರು, ಚಹಾ ಪುಡಿಯಿಂದ ಹಿಡಿದು ಪಾಪ್ ಕಾರ್ನ್ ವರೆಗೆ ಎಲ್ಲದರ ಮೇಲೆ ಜಿಎಸ್‌ಟಿ ಹೇರಿಕೆಯಿಂದಾಗಿ ಪ್ರತಿಯೊಂದು ಕುಟುಂಬದ ಬಜೆಟ್ ಏರುಪೇರಾಗಿದೆ. ಇದೇ ವೇಳೆ ರೈಲು ಪ್ರಯಾಣದ ದರ ಹೆಚ್ಚಿಸುವ ಮೂಲಕ ನರೇಂದ್ರ ಮೋದಿ ಸರ್ಕಾರ ಜನರ ಜೇಬು ಖಾಲಿ ಮಾಡಲು ಹೊರಟಿದೆ’ ಎಂದು ಅವರು ದೂರಿದ್ದಾರೆ.

‘ನಮ್ಮ ಸರ್ಕಾರ ರೈತರಿಗೆ ನೆರವಾಗುವ ಉದ್ದೇಶದಿಂದ ಹಾಲಿನ ದರ ಏರಿಕೆ ಮಾಡಿದಾಗ ಜನವಿರೋಧಿ ಎಂದು ಬೊಬ್ಬಿಟ್ಟಿದ್ದ ಬಿಜೆಪಿ ನಾಯಕರು ತಮ್ಮದೇ ಸರ್ಕಾರ ರೈಲು ಪ್ರಯಾಣ ಹೆಚ್ಚಿಸಿದಾಗ ಸದ್ದಿಲ್ಲದೆ ಬಿಲ ಸೇರಿಕೊಂಡಿದ್ದಾರೆ. ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಏರಿಕೆಯಾದಾಗ ಬೀದಿಗಿಳಿದಿದ್ದ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಪ್ರತಿನಿಧಿಗಳನ್ನು ಹೊಂದಿರುವ ದರ ನಿರ್ಣಯ ಸಮಿತಿಯೇ ಆ ಏರಿಕೆಯ ನಿರ್ಧಾರ ಕೈಗೊಂಡಿರುವುದನ್ನು ಬಚ್ಚಿಟ್ಟು ನಮ್ಮ ಸರ್ಕಾರದ ವಿರುದ್ದ ಜನರನ್ನು ಎತ್ತಿಕಟ್ಟುವ ವಿಫಲ ಪ್ರಯತ್ನ ನಡೆಸಿದ್ದರು.

ರೈಲ್ವೆ ಇಲಾಖೆ ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಸ್ವಾಮ್ಯದಲ್ಲಿದ್ದು, ಪ್ರಪಂಚದಲ್ಲಿಯೇ ಅತ್ಯಂತ ಹೆಚ್ಚು ಪ್ರಯಾಣಿಕರು ಸಂಚರಿಸುವ ಈ ಸಾರಿಗೆ ವ್ಯವಸ್ಥೆ ಈಗಲೂ ಲಾಭದಾಯಕವಾಗಿದೆ. ರೈಲ್ವೆ ಇಲಾಖೆಗೆ ಸಂಬಂಧಿಸಿದ ಪ್ರತ್ಯೇಕ ಬಜೆಟ್ ಮಂಡನೆಯ ಪದ್ಧತಿಯನ್ನು ನರೇಂದ್ರ ಮೋದಿ ಸರ್ಕಾರ ಕೈಬಿಟ್ಟಿರುವ ಕಾರಣ ಇಲಾಖೆಯ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆಯೇ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೊದಲು ಇಲಾಖೆಯ ಕಾರ್ಯನಿರ್ವಹಣೆಯ ಬಗ್ಗೆ ಶ್ವೇತಪತ್ರವನ್ನು ದೇಶದ ಜನತೆಯ ಮುಂದಿಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸುತ್ತೇನೆ’ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೃದಯದ ಆರೋಗ್ಯಕ್ಕಾಗಿ ಇದೊಂದು ಉಸಿರಾಟದ ವ್ಯಾಯಾಮ ಮಾಡಿ

Karnataka Weather: ಈ ಎರಡು ಜಿಲ್ಲೆಗಳಿಗೆ ಇಂದು ಭಾರೀ ಮಳೆ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಮುಂದಿನ ಸುದ್ದಿ
Show comments