Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು

Siddaramaiah-DK Shivakumar

Krishnaveni K

ಬೆಂಗಳೂರು , ಬುಧವಾರ, 26 ನವೆಂಬರ್ 2025 (08:33 IST)
ಬೆಂಗಳೂರು: ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ನಡೆಯುತ್ತಿರುವ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು ಸಿಗಲಿದೆ. ಇಂದು ರಾಜ್ಯ ರಾಜಕೀಯದ ಕುರ್ಚಿ ಕದನಕ್ಕೆ ಕ್ಲೈಮ್ಯಾಕ್ಸ್ ಸಿಗುವ ಸಾಧ್ಯತೆಯಿದೆ.

ಸಿಎಂ ಪಟ್ಟಕ್ಕಾಗಿ ಡಿಕೆ ಶಿವಕುಮಾರ್ ಪಟ್ಟು ಹಿಡಿದಿದ್ದು ಹೈಕಮಾಂಡ್ ಗೆ ನುಂಗಲಾರದ ಬಿಸಿ ತುಪ್ಪವಾಗಿದೆ. ಈ ನಡುವೆ ಇಂದು ರಾಜ್ಯದ ನಾಯಕರ ಅಭಿಪ್ರಾಯ ಸಂಗ್ರಹಿಸಿ ದೆಹಲಿಗೆ ತೆರಳಿರುವ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಸಾಧ್ಯತೆಯಿದೆ.

ಈಗಾಗಲೇ ರಾಹುಲ್ ರಾಜ್ಯದ ಹಿರಿಯ ನಾಯಕ ಬಿಕೆ ಹರಿಪ್ರಸಾದ್, ಸಚಿವ ಪ್ರಿಯಾಂಕ್ ಖರ್ಗೆಯವರನ್ನು ಕರೆಸಿಕೊಂಡು ಮಾಹಿತಿ ಪಡೆದುಕೊಂಡಿದ್ದಾರೆ. ಇದೀಗ ಖರ್ಗೆ-ರಾಹುಲ್ ಭೇಟಿಯಾಗಿ ಮಾತುಕತೆ ನಡೆಸುವ ಸಾಧ್ಯತೆಯಿದೆ. ಈ ವೇಳೆ ಸಿಎಂ ಪಟ್ಟದ ಬಗ್ಗೆ ರಾಹುಲ್ ಪ್ರಮುಖ ತೀರ್ಮಾನ ಕೈಗೊಳ್ಳಬಹುದು.

ಮೂಲಗಳ ಪ್ರಕಾರ ನವಂಬರ್ 29 ರಂದು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನಡುವೆ ಸಂಧಾನ ಸಭೆ ನಡೆಯಲಿದೆ. ಇದಕ್ಕೆ ಸ್ವತಃ ರಾಹುಲ್ ಗಾಂಧಿ ನೇತೃತ್ವ ವಹಿಸಲಿದ್ದಾರೆ. ಈ ಕಾರಣಕ್ಕೆ ಇಬ್ಬರೂ ನಾಯಕರು ದೆಹಲಿಗೆ ತೆರಳುವ ಸಾಧ್ಯತೆಯಿದೆ. ಈ ಮೂಲಕ ಕುರ್ಚಿ ಕದನದ ಗೊಂದಲಗಳಿಗೆ ರಾಹುಲ್ ಗಾಂಧಿ ಸಮ್ಮುಖದಲ್ಲಿಯೇ ತೆರೆ ಎಳೆಯುವ ನಿರೀಕ್ಷೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

Karnataka Weather: ಸೈಕ್ಲೋನ್ ಇಫೆಕ್ಟ್, ಕರ್ನಾಟಕದಲ್ಲಿ ಇನ್ನೆಷ್ಟು ದಿನ ಮಳೆಯಿರಲಿದೆ