Webdunia - Bharat's app for daily news and videos

Install App

ಅಲ್ಲು ಅರ್ಜುನ್ ರೀತಿ ಸಿದ್ದರಾಮಯ್ಯ, ಡಿಕೆಶಿಯನ್ನು ಅರೆಸ್ಟ್ ಮಾಡಬೇಕು: ಬಸನಗೌಡ ಯತ್ನಾಳ್

Krishnaveni K
ಗುರುವಾರ, 5 ಜೂನ್ 2025 (14:30 IST)
ಬೆಂಗಳೂರು: ಹೈದರಾಬಾದ್ ನಲ್ಲಿ ಥಿಯೇಟರ್ ನಲ್ಲಿ ಆದ ಕಾಲ್ತುಳಿತಕ್ಕೆ ಅಲ್ಲು ಅರ್ಜುನ್ ಅವರನ್ನು ಅರೆಸ್ಟ್ ಮಾಡಿದ ಹಾಗೆ ಇಲ್ಲಿ ಡಿಕೆಶಿ, ಸಿದ್ದರಾಮಯ್ಯನವರನ್ನು ಅರೆಸ್ಟ್ ಮಾಡಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.
 
ಪುಷ್ಪ 2 ಸಿನಿಮಾ ರಿಲೀಸ್ ಆದಾಗ ಅಲ್ಲು ಅರ್ಜುನ್ ಥಿಯೇಟರ್ ಭೇಟಿಗೆ ಬಂದಿದ್ದರು. ಅವರನ್ನು ನೋಡಲು ಅಭಿಮಾನಿಗಳು ನೂಕುನುಗ್ಗಲು ನಡೆಸಿದರು. ಪರಿಣಾಮವಾಗಿ ಓರ್ವ ಮಹಿಳೆ ಸಾವನ್ನಪ್ಪಿದರೆ ಆಕೆಯ ಪುತ್ರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ.  ಘಟನೆಗೆ ತೆಲಂಗಾಣದ ಕಾಂಗ್ರೆಸ್ ಸರ್ಕಾರ ಅಲ್ಲು ಅರ್ಜುನ್ ಅವರನ್ನೇ ಹೊಣೆ ಮಾಡಿ ಅರೆಸ್ಟ್ ಮಾಡಿಸಿತ್ತು.
 
 
ಇದೀಗ ರಾಜ್ಯದಲ್ಲಿ ಆರ್ ಸಿಬಿ ಆಟಗಾರರ ಸಂಭ್ರಮಾಚರಣೆ ವೇಳೆ ಸೂಕ್ತ ಭದ್ರತೆ ನೀಡದೆ ಇಷ್ಟು ಜನರ ಸಾವಿಗೆ ಸರ್ಕಾರವೇ ಹೊಣೆಯಾಗಿದೆ. ಹೀಗಾಗಿ ಅಲ್ಲು ಅರ್ಜುನ್ ಗೆ ಮಾಡಿದಂತೆ ಇಲ್ಲಿ ಸಿದ್ದರಾಮಯ್ಯ ಡಿಕೆಶಿಯನ್ನು ಅರೆಸ್ಟ್ ಮಾಡಿಸಬೇಕು ಎಂದು ಯತ್ನಾಳ್ ಆಗ್ರಹಿಸಿದ್ದಾರೆ.
 
 
ಈ ಸರ್ಕಾರ ಎಲ್ಲಾ ರೀತಿಯಲ್ಲೂ ವಿಫಲವಾಗಿದೆ. ಹೀಗಾಗಿ ಸಿದ್ದರಾಮಯ್ಯ ಸರ್ಕಾರ ವಿಸರ್ಜನೆ ಮಾಡಿ ಚುನಾವಣೆಗೆ ಹೋಗುವುದು ಸೂಕ್ತ ಎಂದು ಅವರು ಹೇಳಿದ್ದಾರೆ. ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ ಎಂದಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ, ಬಿಜೆಪಿ ಅಧಿಕಾರ ಹಿಡಿಯುತ್ತೆ: ವಿಶ್ವೇಶ್ವರ ಹೆಗಡೆ ಕಾಗೇರಿ

Pralhad Joshi: ಭಾರತ ಈಗ ಜಗತ್ತಿಗೆ ನಂ 4, ಸದ್ಯದಲ್ಲೇ ನಂ 3 ಆಗ್ತೀವಿ: ಪ್ರಲ್ಹಾದ್ ಜೋಶಿ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

ಮುಂದಿನ ಸುದ್ದಿ
Show comments