Publish Date: Wed, 27 May 2026 (09:16 IST)
Updated Date: Wed, 27 May 2026 (09:18 IST)
ಬೆಂಗಳೂರು: ಸಿಎಂ ಸ್ಥಾನಕ್ಕೆ ರಾಜೀನಾಮೆ ಸುದ್ದಿ ಬೆನ್ನಲ್ಲೇ ಇಂದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಒಂದೇ ವೇದಿಕೆಯಲ್ಲಿ ಒಟ್ಟಿಗೇ ಕಾಣಿಸಿಕೊಳ್ಳಲಿದ್ದಾರೆ.
ರಾಜ್ಯ ರಾಜಕೀಯದಲ್ಲಿ ಈಗ ಕ್ಷಣಕ್ಕೊಂದು ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ನಿನ್ನೆಯಿಂದ ದೆಹಲಿಯಲ್ಲಿ ಬೀಡುಬಿಟ್ಟಿದ್ದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಹೈಕಮಾಂಡ್ ನಾಯಕರ ಜೊತೆ ಮ್ಯಾರಥಾನ್ ಮೀಟಿಂಗ್ ನಡೆಸಿದ್ದಾರೆ.
ಸಿದ್ದರಾಮಯ್ಯಗೆ ರಾಜೀನಾಮೆ ನೀಡಲು ಸ್ವತಃ ರಾಹುಲ್ ಗಾಂಧಿ ಸೂಚಿಸಿದ್ದಾರೆ ಎನ್ನಲಾಗಿದ್ದು ಇದಕ್ಕೆ ಅವರೀಗ ಕೊನೆಗೂ ತಮ್ಮ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ಇದಕ್ಕೆ ಮೊದಲು ಅವರು ಇಂದು ಬೆಂಗಳೂರಿನಲ್ಲಿ ಆಪ್ತರೊಂದಿಗೆ ಸಭೆ ನಡೆಸಲಿದ್ದಾರೆ.
ಹೀಗಾಗಿ ಈಗ ಇಂದು ಸಿದ್ದರಾಮಯ್ಯ ರಾಜೀನಾಮೆ ವಿಚಾರ ಅಧಿಕೃತವಾಗಿ ಪ್ರಕಟಿಸುವ ನಿರೀಕ್ಷೆಯಿದೆ. ಇದರ ನಡುವೆ ಇಂದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಒಂದೇ ವೇದಿಕೆಯಲ್ಲಿ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ. ಇಂದು ದೇಶದ ಪ್ರಥಮ ಪ್ರಧಾನಿ ಜವಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಸಿದ್ದು-ಡಿಕೆಶಿ ಒಟ್ಟಿಗೇ ಭಾಗಿಯಾಗಲಿದ್ದಾರೆ. ರಾಜೀನಾಮೆ ವಿಚಾರ ಸುದ್ದಿಯಲ್ಲಿರುವಾಗಲೇ ಇಬ್ಬರೂ ಒಂದೇ ವೇದಿಕೆ ಹಂಚಿಕೊಳ್ಳುತ್ತಿರುವುದು ಭಾರೀ ಮಹತ್ವ ಪಡೆದುಕೊಂಡಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ