Daily Horoscope
✕

ಸಿಎಂ ಸ್ಥಾನಕ್ಕೆ ರಾಜೀನಾಮೆ ಸುದ್ದಿ ಬೆನ್ನಲ್ಲೇ ಇಂದು ಸಿದ್ದರಾಮಯ್ಯ, ಡಿಕೆಶಿ ಒಂದೇ ವೇದಿಕೆಯಲ್ಲಿ

ಕೃಷ್ಣವೇಣಿ ಕೆ
ಬುಧವಾರ, 27 ಮೇ 2026 (09:16 IST)
ಬೆಂಗಳೂರು: ಸಿಎಂ ಸ್ಥಾನಕ್ಕೆ ರಾಜೀನಾಮೆ ಸುದ್ದಿ ಬೆನ್ನಲ್ಲೇ ಇಂದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಒಂದೇ ವೇದಿಕೆಯಲ್ಲಿ ಒಟ್ಟಿಗೇ ಕಾಣಿಸಿಕೊಳ್ಳಲಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಈಗ ಕ್ಷಣಕ್ಕೊಂದು ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ನಿನ್ನೆಯಿಂದ ದೆಹಲಿಯಲ್ಲಿ ಬೀಡುಬಿಟ್ಟಿದ್ದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಹೈಕಮಾಂಡ್ ನಾಯಕರ ಜೊತೆ ಮ್ಯಾರಥಾನ್ ಮೀಟಿಂಗ್ ನಡೆಸಿದ್ದಾರೆ.

ಸಿದ್ದರಾಮಯ್ಯಗೆ ರಾಜೀನಾಮೆ ನೀಡಲು ಸ್ವತಃ ರಾಹುಲ್ ಗಾಂಧಿ ಸೂಚಿಸಿದ್ದಾರೆ ಎನ್ನಲಾಗಿದ್ದು ಇದಕ್ಕೆ ಅವರೀಗ ಕೊನೆಗೂ ತಮ್ಮ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ಇದಕ್ಕೆ ಮೊದಲು ಅವರು ಇಂದು ಬೆಂಗಳೂರಿನಲ್ಲಿ ಆಪ್ತರೊಂದಿಗೆ ಸಭೆ ನಡೆಸಲಿದ್ದಾರೆ.

ಹೀಗಾಗಿ ಈಗ ಇಂದು ಸಿದ್ದರಾಮಯ್ಯ ರಾಜೀನಾಮೆ ವಿಚಾರ ಅಧಿಕೃತವಾಗಿ ಪ್ರಕಟಿಸುವ ನಿರೀಕ್ಷೆಯಿದೆ. ಇದರ ನಡುವೆ ಇಂದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಒಂದೇ ವೇದಿಕೆಯಲ್ಲಿ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ. ಇಂದು ದೇಶದ ಪ್ರಥಮ ಪ್ರಧಾನಿ ಜವಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಸಿದ್ದು-ಡಿಕೆಶಿ ಒಟ್ಟಿಗೇ ಭಾಗಿಯಾಗಲಿದ್ದಾರೆ. ರಾಜೀನಾಮೆ ವಿಚಾರ ಸುದ್ದಿಯಲ್ಲಿರುವಾಗಲೇ ಇಬ್ಬರೂ ಒಂದೇ ವೇದಿಕೆ ಹಂಚಿಕೊಳ್ಳುತ್ತಿರುವುದು ಭಾರೀ ಮಹತ್ವ ಪಡೆದುಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಂದೆ ತಾಯಿ ತೊಡೆ ಮೇಲೆ ಕೂತಿರುತ್ತಿದ್ದರು ಹೇಳಿಕೆ ಸಮರ್ಥಿಸಿಕೊಂಡ ರಾಹುಲ್ ಗಾಂಧಿ: ಹಳೇಬೀಡು ಶಿಲ್ಪದ ಇತಿಹಾಸ ಗೊತ್ತಾ ಎಂದ ಬಿಜೆಪಿ

Gold Price: ಬೆಂಗಳೂರು ಮತ್ತು ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ ಬೆಲೆ

ಗಾಂಜಾ ಕೇಸ್ ಹಾಕಿ… ಹೋಟೆಲ್ ನಲ್ಲಿ ರೊಮ್ಯಾಂಟಿಕ್ ಮೂಡ್ ನಲ್ಲಿದ್ದ ಯುವ ಜೋಡಿಗೆ ಪೊಲೀಸರ ದರ್ಪ Video

ಪತ್ನಿ ನನ್ನನ್ನು ಅವಮಾನಿಸುತ್ತಿದ್ದಾಳೆ, ಬದುಕಲು ಇಷ್ಟವಿಲ್ಲ: ಪೋಷಕರಿಗೆ ಸೆಲ್ಫಿ ವಿಡಿಯೋ ಕಳುಹಿಸಿ ಯುವಕ ಮಾಡಿದ್ದೇನು Video

ಸೋನಿಯಾ ಗಾಂಧಿ ಬುಕ್ ಲಾಂಚ್ ನಲ್ಲಿ ಹಿಂದಿನ ಸಾಲಿನಲ್ಲಿ ಕೂತಿದ್ದೇಕೆ: ಗುಟ್ಟು ಬಿಟ್ಟುಕೊಟ್ಟ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments