Select Your Language

Notifications

webdunia
webdunia
webdunia
webdunia

ವಿಶ್ವವಿಖ್ಯಾತ ಜಂಬೂ ಸವಾರಿಗೆ ಚಾಲನೆ, ಪುಷ್ಪಾರ್ಚನೆ ಮಾಡಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

Mysore Dasara 2024, Jamboo Savari, Chief Minister Siddaramaiah

Sampriya

ಮೈಸೂರು , ಶನಿವಾರ, 12 ಅಕ್ಟೋಬರ್ 2024 (17:52 IST)
Photo Courtesy X
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂ ಸವಾರಿಗೆ ಚಾಲನೆ ದೊರಕಿದೆ. ನಾಡದೇವತೆ ಚಾಮುಂಡೇಶ್ವರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ರಿಂದ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ ಚಾಲನೆ ದೊರಕಿತು.

ಕೋಟ್ಯಾಂತರ ಭಕ್ತರು ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಲಾದ ನಾಡದೇವಿ ಚಾಮುಂಡೇಶ್ವರಿಯನ್ನು ಆಶೀರ್ವಾದ ಪಡೆದರು. ಅಭಿಮನ್ಯು ನಾಡ ಅಧಿದೇವತೆ ಚಾಮುಂಡೇಶ್ವರಿಯನ್ನು ಹೊತ್ತು ಗಜ ಗಾಂಭೀರ್ಯದಿಂದ ಹೆಜ್ಜೆ ಹಾಕಿದ. ಅರಮನೆಯಿಂದ ಬನ್ನಿ ಮಂಟಪದವರೆಗೆ ಜಂಬೂಸವಾರಿ ಮೆರವಣಿಗೆ ನಡೆಯಲಿದೆ.

ಜಂಬೂಸವಾರಿ ಪೂರ್ಣಗೊಂಡ ನಂತರ ಬನ್ನಿಮಂಟಪದ ಮೈದಾನದಲ್ಲಿ ದಸರಾ ಪಂಜಿನ ಕವಾಯತು ನಡೆಯಲಿದೆ. ಇನ್ನೂ ನಿಗದಿ ಪಡಿಸಿದ ಸಮಯಗಿಂತ ತಡವಾಗಿ ಜಂಬೂಸವಾರಿಗೆ ಪುಷ್ಪಾರ್ಚನೆ ನೆರವೇರಿತು.  4.40 ರಿಂದ 5 ಗಂಟೆಯ ಒಳಗೆ ಸಲ್ಲುವ ಮೀನ ಲಗ್ನದಲ್ಲಿ ಉಪ್ಪಾರ್ಚನೆ ಆಗಬೇಕಿತ್ತು.  ಆದರೆ 9 ನಿಮಿಷಗಳು ತಡವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಾಲಾ ಸಿಬ್ಬಂದಿ ಜತೆ ಹಬ್ಬ ಆಚರಿಸಿದ ಐಶ್ವರ್ಯ ಡಿಕೆಶಿ ಸರಳತೆಗೆ ಭಾರೀ ಮೆಚ್ಚುಗೆ