Publish Date: Sun, 27 Jan 2019 (14:42 IST)
Updated Date: Sun, 27 Jan 2019 (14:44 IST)
ಬೆಂಗಳೂರು : ಆಪರೇಷನ್ ಕಮಲದ ಬಗ್ಗೆ ಮಾತನಾಡುವ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಶಾಸಕ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದಗಂಗಾ ಶ್ರೀಗಳ ಅಂತ್ಯಕ್ರಿಯೆಯಲ್ಲಿ ಯಡಿಯೂರಪ್ಪ ರಾತ್ರಿಯಿಡಿ ಕುಳಿತರೂ ಅವರಿಗೆ ಭಾರತರತ್ನ ಕೊಡಿಸಲು ಆಗಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಶವದೊಂದಿಗೆ ರಾಜಕೀಯ ಮಾಡುವ ಸಿದ್ದರಾಮಯ್ಯ ಖಂಡಿತವಾಗಿಯೂ ಉದ್ಧಾರ ಆಗುವುದಿಲ್ಲ ಎಂದು ಕಿಡಿಕಾರಿದ್ದಾರೆ. ಅಲ್ಲದೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಜೆಡಿಎಸ್ ನಿಂದ ಕಾಂಗ್ರೆಸ್ ಗೆ ಹೋದಾಗ ಎಷ್ಟು ಹಣ ಪಡೆದಿದ್ದರು ಎಂಬುದನ್ನು ಬಹಿರಂಗ ಪಡಿಸಲಿ ಎಂದು ಹೇಳಿದ್ದಾರೆ.
ಸಮ್ಮಿಶ್ರ ಸರ್ಕಾರದ ಇಬ್ಬರು ಸಿಎಂಗಳಿಗೆ ವರ್ಗಾವಣೆ ದಂಧೆ ವರವಾಗಿದೆ. ಅಣ್ಣ ತಮ್ಮ ಇಬ್ಬರು ಮುಖ್ಯಮಂತ್ರಿಗಳಂತೆ ವರ್ತಿಸುತ್ತಿದ್ದಾರೆ. ರಾಜ್ಯದಲ್ಲಿ ಆಡಳಿತ ಕುಲಗೆಟ್ಟು ಹೋಗಿದೆ. ಜೆಡಿಎಸ್ ನವರು 2-3 ಚುನಾವಣೆಗೆ ಆಗುವಷ್ಟು ಹಣ ಮಾಡುತ್ತಿದ್ದಾರೆ’ ಎಂದು ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.