ಸಿದ್ದರಾಮಯ್ಯ ಬೆಂಗಾವಲು ವಾಹನಕ್ಕೆ ಅಡ್ಡ, ಜನಾರ್ದನ ರೆಡ್ಡಿ ಕಾರು ವಶಕ್ಕೆ

Sampriya
ಮಂಗಳವಾರ, 8 ಅಕ್ಟೋಬರ್ 2024 (15:57 IST)
Photo Courtesy X
ಗಂಗಾವತಿ: ಈಚೆಗೆ ಸಿಎಂ ಸಿದ್ದರಾಮಯ್ಯ ಅವರು  ಗಂಗಾವತಿ ಮಾರ್ಗವಾಗಿ ಬಳ್ಳಾರಿಗೆ ತೆರಳುವಾಗ ಅವರ ಬೆಂಗಾವಲು ವಾಹನಗಳ ವಿರುದ್ಧ ದಿಕ್ಕಿಗೆ ಶಾಸಕ ಜನಾರ್ದನ ರೆಡ್ಡಿ ಕಾರುಗಳು ಸಾಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ರೆಡ್ಡಿ ಕಾರನ್ನು ವಶಕ್ಕೆ ಪಡೆದಿದ್ದಾರೆ.

ಝೀರೋ ಟ್ರಾಫಿಕ್ ನಿಯಮ ಉಲ್ಲಂಘಟನೆ ಮಾಡಿದ್ದರ ಅನ್ವಯ ಜನಾರ್ದನ ರೆಡ್ಡಿಯ ಮೂವರು ಕಾರು ಚಾಲಕರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಸಂಬಂಧ ಪೊಲೀಸರು ರೆಡ್ಡಿ ಅವರ ಒಂದು ಹಾಗೂ ಅವರ ಬೆಂಬಲಿಗರ ಎರಡು ಕಾರುಗಳನ್ನು ಮಂಗಳವಾರ ವಶಕ್ಕೆ ಪಡೆದುಕೊಂಡಿದ್ದಾರೆ.

 ನಿಯಮ ಉಲ್ಲಂಘಿಸಿದ ವಾಹನಗಳನ್ನು ಇಲ್ಲಿನ ಸಂಚಾರ ಪೊಲೀಸ್‌ ಠಾಣೆಗೆ ತರಲಾಗದ್ದು ಪೊಲೀಸರು ಪಂಚನಾಮೆ ಮಾಡಿದರು.

ಈ ಘಟನೆ ಕುರಿತು ವಿಡಿಯೊ ಹೇಳಿಕೆ ನೀಡಿರುವ ಜನಾರ್ದನ ರೆಡ್ಡಿ ಅವರು ತುರ್ತು ಕಾರ್ಯಕ್ರಮದ ಹಿನ್ನೆಲೆ ಆ ರೀತಿ ಹೋಗಬೇಕಾಯಿತು. ಬಳ್ಳಾರಿಯ ಮನೆಯಲ್ಲಿ ಅಂದು ಹೋಮ ಆಯೋಜಿಸಲಾಗಿತ್ತು. ತುರ್ತಾಗಿ ಆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗಬೇಕಿದ್ದರೂ ಸಂಚಾರ ದಟ್ಟಣೆಯಲ್ಲಿಯೇ ಸುಮಾರು ಅರ್ಧಗಂಟೆ ಕಾದಿದ್ದೇನೆ. ಯಾರೇ ಮುಖ್ಯಮಂತ್ರಿಯಾದರೂ ಜನರಿಗೆ ತೊಂದರೆ ಕೊಡಬಾರದು ಎಂದಿದ್ದಾರೆ.

ತುರ್ತಾಗಿ ಕಾರ್ಯಕ್ರಮಕ್ಕೆ ಹೋಗಬೇಕಿದ್ದರಿಂದ ಮಾತ್ರ ರಸ್ತೆ ವಿಜಭಕ ದಾಟಿ ಹೋಗಿದ್ದೇನೆ. ಇದರಲ್ಲಿ ಯಾವುದೇ ದುರುದ್ದೇಶವಿಲ್ಲ. ಮಾಧ್ಯಮಗಳೂ ಇದನ್ನು ತಪ್ಪಾಗಿ ಗ್ರಹಿಸಿವೆ ಎಂದು ಹೇಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

ಮುಂದಿನ ಸುದ್ದಿ
Show comments