ಮೈಸೂರು: ಕರ್ನಾಟಕದ ಸುದೀರ್ಘ ಕಾಲದ ಸಿಎಂ ಎಂದು ಇಂದು ದೇವರಾಜು ಅರಸು ದಾಖಲೆ ಮುರಿದ ಬಗ್ಗೆ ಅವರು ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ. ಈ ವೇಳೆ ಸಿಎಂ ಬದಲಾವಣೆ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ.
ಸಿಎಂ ಆಗಿ 2794 ದಿನ ಪೂರೈಸಿ ದಾಖಲೆ ಮಾಡಿದ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಸಿಎಂ ಬದಲಾವಣೆ ಬಗ್ಗೆ ಹೇಳಿಕೆ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ದಾಖಲೆಯನ್ನು ಮುರಿಯಲೆಂದು ನಾನು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯವಾಗಿ ಆಗಿದೆ. ಜನರ ಆಶೀರ್ವಾದದಿಂದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲು ಸಾಧ್ಯವಾಗಿದೆ. ಮುಖ್ಯಮಂತ್ರಿಯಾಗಿ ಈ ಅವಧಿಯನ್ನು ಪೂರ್ಣಗೊಳಿಸುವ ವಿಶ್ವಾಸವಿದೆ. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡಬೇಕಷ್ಟೆ ಎಂದಿದ್ದಾರೆ.
ಇಷ್ಟು ವರ್ಷಗಳ ರಾಜಕಾರಣ ತೃಪ್ತಿ ತಂದಿದೆ. ಜನರ ಕೆಲಸ ಮಾಡುವುದು ಖುಷಿಯ ಸಂಗತಿ. ರಾಜಕಾರಣ ಎಂದರೆ ಬಡವರು, ದಲಿತರು, ಹಿಂದುಳಿದವರ ಕೆಲಸ ಮಾಡಿಕೊಡುವುದು. ಹೆಚ್ಚೆಂದರೆ ಶಾಸಕನಾಗಬೇಕೆಂದು ಅಂದುಕೊಂಡಿದ್ದೆ. ಶಾಸಕನಾದೆ, ಮಂತ್ರಿ, ಉಪಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿಯೂ ಆದೆ. ಅವಕಾಶಗಳು ಸಿಕ್ಕಿದ್ದರಿಂದ ಇವೆಲ್ಲ ಆಗಲು ಸಾಧ್ಯವಾಯಿತು ಎಂದಿದ್ದಾರೆ.