ಮುಖ್ಯಮಂತ್ರಿಯಾಗಿ ದಾಖಲೆ ಮಾಡಿದ ದಿನವೇ ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ

Krishnaveni K
ಮಂಗಳವಾರ, 6 ಜನವರಿ 2026 (14:48 IST)
ಮೈಸೂರು: ಕರ್ನಾಟಕದ ಸುದೀರ್ಘ ಕಾಲದ ಸಿಎಂ ಎಂದು ಇಂದು ದೇವರಾಜು ಅರಸು ದಾಖಲೆ ಮುರಿದ ಬಗ್ಗೆ ಅವರು ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ. ಈ ವೇಳೆ ಸಿಎಂ ಬದಲಾವಣೆ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ.

ಸಿಎಂ ಆಗಿ 2794 ದಿನ ಪೂರೈಸಿ ದಾಖಲೆ ಮಾಡಿದ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಸಿಎಂ ಬದಲಾವಣೆ ಬಗ್ಗೆ ಹೇಳಿಕೆ ನೀಡಿದ್ದಾರೆ. ‘ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ದಾಖಲೆಯನ್ನು ಮುರಿಯಲೆಂದು ನಾನು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯವಾಗಿ ಆಗಿದೆ. ಜನರ ಆಶೀರ್ವಾದದಿಂದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲು ಸಾಧ್ಯವಾಗಿದೆ. ಮುಖ್ಯಮಂತ್ರಿಯಾಗಿ ಈ ಅವಧಿಯನ್ನು ಪೂರ್ಣಗೊಳಿಸುವ ವಿಶ್ವಾಸವಿದೆ. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡಬೇಕಷ್ಟೆ’ ಎಂದಿದ್ದಾರೆ.

‘ಇಷ್ಟು ವರ್ಷಗಳ ರಾಜಕಾರಣ ತೃಪ್ತಿ ತಂದಿದೆ. ಜನರ ಕೆಲಸ ಮಾಡುವುದು ಖುಷಿಯ ಸಂಗತಿ. ರಾಜಕಾರಣ ಎಂದರೆ ಬಡವರು, ದಲಿತರು, ಹಿಂದುಳಿದವರ ಕೆಲಸ ಮಾಡಿಕೊಡುವುದು. ಹೆಚ್ಚೆಂದರೆ ಶಾಸಕನಾಗಬೇಕೆಂದು ಅಂದುಕೊಂಡಿದ್ದೆ. ಶಾಸಕನಾದೆ, ಮಂತ್ರಿ, ಉಪಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಹಾಗೂ  ಮುಖ್ಯಮಂತ್ರಿಯೂ ಆದೆ. ಅವಕಾಶಗಳು ಸಿಕ್ಕಿದ್ದರಿಂದ ಇವೆಲ್ಲ ಆಗಲು ಸಾಧ್ಯವಾಯಿತು’ ಎಂದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲವೂ ಅಂದುಕೊಂಡಂತೆ ನಡೆದರೆ ಈ ದಿನವೇ ಸಿದ್ದರಾಮಯ್ಯರಿಂದ ರಾಜ್ಯ ಬಜೆಟ್

ಮುಂಬೈ, ಮಹಾರಾಷ್ಟ್ರದ ನಗರವಲ್ಲ: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ವಿರೋಧ

ಗುಜರಾತ್‌ನ ಸೋಮನಾಥ ದೇವಸ್ಥಾನಕ್ಕೆ ನರೇಂದ್ರ ಮೋದಿ ಭೇಟಿ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕಾಂಗ್ರೆಸ್ ಯುವ ನಾಯಕ ರಾಹುಲ್‌ಗೆ ಬಿಗ್‌ಶಾಕ್‌

Karnataka Weather: ಸಿಲಿಕಾನ್ ಸಿಟಿಯಲ್ಲಿ ಇಂದಿನ ಹವಾಮಾನ ಇಲ್ಲಿದೆ

ಮುಂದಿನ ಸುದ್ದಿ
Show comments