Select Your Language

Notifications

webdunia
webdunia
webdunia
webdunia

ಸುಧಾಕರ್ ಆರೋಗ್ಯದ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ

CM Siddaramaiah
ಬೆಂಗಳೂರು: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ್ಯ ಸಚಿವ ಡಿ ಸುಧಾಕರ್ ಅವರು ಆರೋಗ್ಯವನ್ನು ಸಿಎಂ ಸಿದ್ದರಾಮಯ್ಯ ವಿಚಾರಿಸಿದ್ದಾರೆ. ಭೇಟಿ ಬಳಿಕ ಸುಧಾಕರ್ ಕುಟುಂಬದ ಜತೆ ಸಿದ್ದರಾಮಯ್ಯ ಮಾತನಾಡಿದ್ದಾರೆ.

ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಿಎಂ, ಸಚಿವರಿಗೆ ಇನ್ನೂ ಪ್ರಜ್ಞೆ ಬಂದಿಲ್ಲ. ಶ್ವಾಸಕೋಶ ಟ್ರಾನ್ಸ್‌ ಪ್ಲಾಂಟ್ ಮಾಡಬೇಕಾದ್ರೆ ಮೆದಳು ಪ್ರಜ್ಞೆಯಲ್ಲಿರಬೇಕು. ಈ ಬಗ್ಗೆ ವೈದ್ಯರು ನಾಳೆ ತೀರ್ಮಾನ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು. 

ಸಚಿವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನು ಸಚಿವರ ಬೇರೆಲ್ಲಾ ಆರ್ಗನ್ಸ್‌ ಸ್ಟೇಬಲ್‌ ಆಗಿದೆ. ನಾಳೆ ವೈದ್ಯರು ಸಿಟಿ ಸ್ಕ್ಯಾನ್ ಮಾಡಲಿದ್ದಾರೆ. ಅದಾದ ನಂತರ ಕಂಡಿಷನ್ ಎನೆಂದು ತಿಳಿಸಲಿದ್ದಾರೆ. ಮಾಧ್ಯಮಗಳ ಹೆಚ್ಚಿನ ಪ್ರಶ್ನೆಗೆ ʻಐ ಎಮ್ ನಾಟ್ ಎ ಡಾಕ್ಟರ್ʼ ಎಂದು ಹೇಳಿ ಅಲ್ಲಿಂದ ತೆರಳಿದ್ದಾರೆ.

ಕೆಲವು ದಿನಗಳ ಹಿಂದೆ ಸುಧಾಕರ್ ಅವರು ಸಾಮಾನ್ಯ ಮೊಣಕಾಲು ಶಸ್ತ್ತಚಿಕಿತ್ಸೆಗಾಗಿ ಯಶವಂತಪುರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆಪರೇಷನ್ ಯಶಸ್ವಿಯಾದ ನಂತರದ ದಿನಗಳಲ್ಲಿ ಅವರಿಗೆ ಹಠಾತ್ತನೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿತು. ಮಣಿಪಾಲ್ ಆಸ್ಪತ್ರೆಯಲ್ಲಿ ಸೋಂಕಿಗೆ ಚಿಕಿತ್ಸೆ ನೀಡಲಾಯಿತಾದರೂ, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿರಲಿಲ್ಲ.

ಶ್ವಾಸಕೋಶದ ಸೋಂಕು ಗಂಭೀರ ಸ್ವರೂಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ಅವರನ್ನು ಮಣಿಪಾಲ್ ಆಸ್ಪತ್ರೆಯಿಂದ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಮದುವೆ ನೆಪದಲ್ಲಿ ಯುವತಿಗೆ ದೋಖಾ: ಮಗು, ಸಂತ್ರಸ್ತೆ ಪಾಲನೆಗೆ ಕೃಷ್ಣ ಜೆ ರಾವ್‌ ಎಷ್ಟು ಹಣ ನೀಡಬೇಕು ಗೊತ್ತಾ