Select Your Language

Notifications

webdunia
webdunia
webdunia
webdunia

ಸಿಎಂ ಬದಲಾವಣೆ ಚರ್ಚೆಯ ನಡುವೆ ಸ್ಫೋಟಕ ಹೇಳಿಕೆ ಕೊಟ್ಟ ಸಿದ್ದರಾಮಯ್ಯ

CM Siddaramaiah

Sampriya

ಮಂಗಳೂರು , ಸೋಮವಾರ, 27 ಅಕ್ಟೋಬರ್ 2025 (17:32 IST)
ಮಂಗಳೂರು: ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ವಿಚಾರ ಸದ್ದು ಮಾಡುತ್ತಿರುವ ಬೆನ್ನಲ್ಲೇ  ಹೈಕಮಾಂಡ್ ತೀರ್ಮಾನ ಮಾಡಿದರೆ  ಐದು ವರ್ಷ ತಾವೇ ಮುಖ್ಯಮಂತ್ರಿಯಾಗಿ ಮುಂದುವರಿಯುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ..

ಇಲ್ಲಿ ಮಾಧ್ಯಮವರು 5 ವರ್ಷ ನೀವೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹೈಕಮಾಂಡ್‌ ತೀರ್ಮಾನ ಮಾಡಿದರೆ ಎಂದು ಪ್ರತಿಕ್ರಿಯಿಸಿದರು.

ಇದೀಗ ಕೆಲವರು ಸಿಎಂ ಆಕ್ಷಾಂಕ್ಷಿ ಎಂದು ಹೇಳುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪ್ರಜಾಪ್ರಭುತ್ವದಲ್ಲಿ ಸ್ಪರ್ಧೆಯಲ್ಲಿ ಇರಬಾರದು ಎಂದು ಹೇಳಲು ಆಗಲ್ಲ. ಆಕಾಂಕ್ಷೆ ವ್ಯಕ್ತಪಡಿಸುವುದು ಅವರ ಹಕ್ಕು. ಅಂತಿಮವಾಗಿ ಹೈಕಮಾಂಡ್‌ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.

ಇನ್ನೂ ಮುಖ್ಯಮಂತ್ರಿ ವಿಷಯ ಪದೇ ಪದೇ ಚರ್ಚೆಯಾಗುತ್ತಿರುವ ಬಗ್ಗೆ ಪ್ರತಕ್ರಿಯಿಸಿದ ಅವರು, ನೀವು (ಮಾಧ್ಯಮದವರು) ಪದೇ ಪದೇ ಕೇಳುತ್ತೀರಲ್ಲ. ಅದಕ್ಕೆ ವಿಷಯ ಚರ್ಚೆಗೆ ಬರುತ್ತದೆ ಎಂದರು.


Share this Story:

Follow Webdunia kannada

ಮುಂದಿನ ಸುದ್ದಿ

Womens World Cup: ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯವನ್ನು ಎದುರಿಸುತ್ತಿರುವ ಭಾರತಕ್ಕೆ ದೊಡ್ಡ ಹೊಡೆತ