ಸಿಎಂ ಬದಲಾವಣೆ ಕೂಗಿನ ಬೆನ್ನಲ್ಲೇ ಸಿದ್ದರಾಮಯ್ಯಗೆ ಎಐಸಿಸಿಯಲ್ಲಿ ಹೊಸ ಜವಾಬ್ದಾರಿ: ಏನಿದು ಲೆಕ್ಕಾಚಾರ

Sampriya
ಭಾನುವಾರ, 6 ಜುಲೈ 2025 (13:06 IST)
Photo Credit X
ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಕೂಗಿನ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರನ್ನು ಎಐಸಿಸಿ ಒಬಿಸಿ ರಾಷ್ಟ್ರೀಯ ಸಲಹಾ ಮಂಡಳಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ರಾಷ್ಟ್ರ ರಾಜಕಾರಣದತ್ತ ಸಿದ್ದರಾಮಯ್ಯ ಹೋಗುತ್ತಾರಾ ಎಂಬ ಪ್ರಶ್ನೆ ಎದ್ದಿದೆ. 

ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೇಳಿಕೆ – ಪ್ರತಿ ಹೇಳಿಕೆಗಳ ಜಟಾಪಟಿ ನಡೆಯುತ್ತಿದೆ. ಈ ಮಧ್ಯೆ ಸಿದ್ದರಾಮಯ್ಯ ಅವರ ಈ ನೇಮಕ ಮಹತ್ವ ಪಡೆದಿದೆ. 

ಎಐಸಿಸಿ ಒಬಿಸಿ ರಾಷ್ಟ್ರೀಯ ಸಲಹಾ ಮಂಡಳಿಯ ಚಟುವಟಿಕೆ ಕರ್ನಾಟಕದಿಂದಲೇ ಆರಂಭಿಸಲು ಎಐಸಿಸಿ ನಿರ್ಧರಿಸಿದ್ದು, ಇದೇ ಜುಲೈ 15ರಂದು ಬೆಂಗಳೂರಿನಲ್ಲಿ ಮೊದಲ ಸಭೆ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿ ಆವರಣದಲ್ಲಿನ ಭಾರತ್ ಜೋಡೊ ಭವನದಲ್ಲಿ ಮಂಡಳಿಯ ಮೊದಲ ಸಭೆ ನಡೆಯಲಿದೆ. 

ಮಂಡಳಿಯ ಸದಸ್ಯರು, ಸಂಚಾಲಕರು, ಕಾರ್ಯದರ್ಶಿಗಳು, ಕಾಂಗ್ರೆಸ್‌ನ ಹಿಂದುಳಿದ ವರ್ಗಗಳ ಪ್ರಮುಖ ನಾಯಕರು ಸೇರಿದಂತೆ ದೇಶದ ವಿವಿಧ ರಾಜ್ಯಗಳ 90 ನಾಯಕರಿಗೆ ಸಭೆಯಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ. ಈ ಪೈಕಿ ಐವರು ಮಾಜಿ ಸಿಎಂಗಳು, 10 ಮಂದಿ ಕೇಂದ್ರದ ಮಾಜಿ ಸಚಿವರೂ ಸಹ ಪಾಲ್ಗೊಳ್ಳುವ ಸಾಧ್ಯತೆಯಿದೆ.

ನಾಲ್ವರು ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ 24 ಸದಸ್ಯರಿರುವ ಈ ಸಲಹಾ ಮಂಡಳಿಯನ್ನು ಸಿದ್ದರಾಮಯ್ಯ ಅವರು ಮುನ್ನಡೆಸಲಿದ್ದಾರೆ. ಸಲಹಾ ಮಂಡಳಿ ರಚನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದನೆ ನೀಡಿದ್ದಾರೆ. ರಾಜ್ಯದ ಕಾಂಗ್ರೆಸ್ ನಾಯಕರ ಪೈಕಿ ಸಿದ್ದರಾಮಯ್ಯ ಅವರೊಂದಿಗೆ ಬಿ.ಕೆ ಹರಿಪ್ರಸಾದ್ ಹಾಗೂ ಮಾಜಿ ಸಿಎಂ ಎಂ.ವೀರಪ್ಪ ಮೊಯಿಲಿ ಕೂಡ ಮಂಡಳಿಯಲ್ಲಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments