ಪರ ವಿರೋಧದ ನಡುವೆಯೂ ಜಾತಿ ಗಣತಿ ವರದಿ ಮಂಡನೆಗೆ ಸಿದ್ಧವಾದ ಸರ್ಕಾರ

Krishnaveni K
ಮಂಗಳವಾರ, 8 ಅಕ್ಟೋಬರ್ 2024 (09:53 IST)
ಬೆಂಗಳೂರು: ಪರ-ವಿರೋಧದ ಚರ್ಚೆ ನಡುವೆಯೂ ರಾಜ್ಯ ಸರ್ಕಾರ ಜಾತಿ ಗಣತಿ ವರದಿ ಮಂಡನೆಗೆ ಮುಹೂರ್ತ ಫಿಕ್ಸ್ ಮಾಡಿಕೊಂಡಿದೆ. ಅಕ್ಟೋಬರ್ 18 ರಂದು ಜಾತಿಗಣತಿ ವರದಿ ಮಂಡನೆಯಾಗಲಿದೆ.

ಮುಂದಿನ ಸಚಿವ ಸಂಪುಟ ಸಭೆಯಲ್ಲೇ ಕಾಂತರಾಜು ವರದಿ ಮಂಡಿಸಿ ಚರ್ಚೆ ನಡೆಸುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಜಾತಿಗಣತಿ ವರದಿ ಪ್ರಕಟಿಸುವಂತೆ ಹಿಂದುಳಿದ ವರ್ಗಗಳ ಸಚಿವರು, ಶಾಸಕರಿಂದ ಒತ್ತಡ ಕೇಳಿಬಂದಿತ್ತು. ವರದಿ ಮಂಡನೆಗೆ ಒತ್ತಡ ಹೆಚ್ಚಾಗಿರುವುದರಿಂದ ಈ ತೀರ್ಮಾನಕ್ಕೆ ಬರಲಾಗಿದೆ.

ಮುಂದೇನಾಗಬಹುದು?
ಜಾತಿಗಣತಿ ವರದಿ ಪ್ರಕಟ ಬಳಿಕ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚನೆ ಮಾಡುವ ಸಾಧ್ಯತೆಯಿದೆ. ಜಾತಿಗಣತಿ ವರದಿ ಜಾರಿಗೆ ಸಂಪುಟದ ಒಪ್ಪಿಗೆ ಬಳಿಕ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆಗೆ ಬರಲಿದೆ. ಈ ವೇಳೆ ವಿಪಕ್ಷಗಳಿಂದ ತೀವ್ರ ಆಕ್ಷೇಪ ಎದುರಾಗುವ ಸಾಧ್ಯತೆಯಿದೆ. ಜಾತಿ ವರದಿಗೆ ಅನುಗುಣವಾಗಿ ಆರ್ಥಿಕ ಅನುದಾನ ಹಂಚಿಕೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ.

ಒಂದೆಡೆ ಒಳಮೀಸಲಾತಿಗಾಗಿ ಬಿಜೆಪಿ ಹೋರಾಟ ನಡೆಸಲು ಸಜ್ಜಾಗಿದ್ದು, ಇದರ ನಡುವೆಯೇ ರಾಜ್ಯ ಸರ್ಕಾರ ಜಾತಿಗಣತಿ ವರದಿ ಪ್ರಕಟಿಸಿ ಮೀಸಲಾತಿ ಹೋರಾಟವನ್ನು ಹತ್ತಿಕ್ಕಲು ಪರೋಕ್ಷವಾಗಿ ಮುಂದಾಗಿದೆ ಎಂದೂ ವಿಶ್ಲೇಷಿಸಲಾಗಿದೆ. ಇನ್ನೊಂದೆಡೆ ಜಾತಿಗಣತಿ ಅವೈಜ್ಞಾನಿಕ ಎಂಬ ಆರೋಪಗಳೂ ಕೇಳಿಬಂದಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಮೊದಲು ವರದಿ ಬರಲಿ, ವರದಿಯಲ್ಲಿ ಏನಿದೆ ಎಂದು ತಿಳಿದುಕೊಂಡು ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಂಚ ಪಡೆಯುತ್ತಿರುವಾಗಲೇ ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸ್ ಇನ್ಸ್‌ಪೆಕ್ಟರ್‌, ಹೈಡ್ರಾಮಾ

ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇನ್ಸ್ ಪೆಕ್ಟರ್: ಬಳಿಕ ಮಾಡಿದ್ದೇನು video

ರಾಜ್ಯದಲ್ಲಿ ಮಂಗನ ಜ್ವರಕ್ಕೆ ಮೊದಲ ಸಾವು, ಎಲ್ಲಿ ಗೊತ್ತಾ

ನಕಲಿ ಕಾಂಗ್ರೆಸ್ ಪಕ್ಷ ಮಹಾತ್ಮ ಗಾಂಧಿಗೂ ಟೋಪಿ ಹಾಕುವ ಕೆಲಸ ಮಾಡಿದೆ: ವಿಜಯೇಂದ್ರ

ರಾಜ್ಯ ಸರಕಾರದಿಂದ ಗ್ಯಾರಂಟಿಯಲ್ಲಿ ಜನರಿಗೆ ಬಹುದೊಡ್ಡ ಮೋಸ: ಮಹೇಶ್ ಟೆಂಗಿನಕಾಯಿ

ಮುಂದಿನ ಸುದ್ದಿ
Show comments