ಬೆಂಗಳೂರು: ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ ಮತ್ತು ಛಲವಾದಿ ನಾರಾಯಣಸ್ವಾಮಿ ವಿಧಾನಸೌಧದ ಮಂದೆ ಪ್ರತಿಭಟನೆ ನಡೆಸಿದರು.
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಿಗಳಿಗೆ ಆತ್ಮಹತ್ಯೆ ಭಾಗ್ಯ ಕರುಣಿಸಿದೆ ಎಂದು ಆರೋಪಿಸಿದೆ.
ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.
ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ
ಪ್ರತಿಭಟನೆ ನಡೆಸಲಾಯಿತು.
ಸರ್ಕಾರಿ ಅಧಿಕಾರಿಗಳಿಗೆ ರಕ್ಷಣೆ ನೀಡಬೇಕು ಮತ್ತು ತಮ್ಮ ಕರ್ತವ್ಯ ನಿರ್ವಹಿಸಲು ಭಯ ಮುಕ್ತ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಮಹಾ ನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕರಾದ ನಾರಾಯಣಸ್ವಾಮಿ ಉಪಸ್ಥಿತರಿದ್ದರು.