ಸಿದ್ದರಾಮಯ್ಯ ಸರ್ಕಾರ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟಿದೆ: ಕುಮಾರಸ್ವಾಮಿ ವ್ಯಂಗ್ಯ

Sampriya
ಭಾನುವಾರ, 9 ನವೆಂಬರ್ 2025 (10:19 IST)
ಬೆಂಗಳೂರು: ರಾಜ್ಯದಲ್ಲಿರುವ ಸಿದ್ದರಾಮಯ್ಯ ಸರ್ಕಾರವು  ಕಬ್ಬು ಬೆಳೆಗಾರರಿಗೆ ಕಿವಿಯಲ್ಲಿ ಹೂವು ಇಟ್ಟು ದೊಡ್ಡ ದೋಖಾ ಮಾಡಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. 

ಸಿದ್ದರಾಮಯ್ಯ ಅವರು ಸಿಎಂ ಅವರು ಮೋದಿಗೆ ಅವರಿಗೆ ‌ಪತ್ರ ಬರೆದು ಅವರ ಮೇಲೆ ಗೂಬೆ ಕೂರಿಸೋ ಕೆಲಸ ಮಾಡಿದರು. ಹಿಂದೆ ಒಮ್ಮೆ ವಿಧಾನಸಭೆಯಲ್ಲಿ ಇದೇ ಸಿಎಂ, ಡಿಸಿಎಂ ಸೇವಂತಿಗೆ ಹೂವನ್ನು ಕಿವಿ ಮೇಲೆ ಇಟ್ಟುಕೊಂಡು ಬಂದಿದ್ದರು. ಅಂದು ಕಿವಿಗೆ ಹೂ ಇಟ್ಟುಕೊಂಡಿದ್ದ ಇವರು, ಇಂದು ಎರಡೂವರೆ ವರ್ಷದಲ್ಲಿ ನಿತ್ಯವೂ ಜನರ ಕಿವಿಗೆ ಹೂ ಮುಡಿಸುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಪ್ರಧಾನಿ ಮೋದಿ ಅವರು ಕಬ್ಬಿಗೆ ಎಫ್‌ಆರ್‌ಪಿ ದರ ಎಂದು ಟನ್‌ಗೆ ₹3,550 ನಿಗದಿ ಮಾಡಿದ್ದಾರೆ. ಆದರೆ ಶುಕ್ರವಾರದ ದಿನ ಸಿಎಂ, ಡಿಸಿಎಂ ‌ಮ್ಯಾರಾಥಾನ್ ಸಭೆ ಮಾಡಿದರು. ದಿನಪೂರ್ತಿ ಸಭೆ ನಡೆಸಿ ₹100 ಮಾತ್ರ ಜಾಸ್ತಿ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು.

ಕೇಂದ್ರ ಸರ್ಕಾರ ₹3550 ಎಫ್‌ಆರ್‌ಪಿ ನಿಗದಿ ಮಾಡಿದೆ. ರೈತರು ಕೇಳಿದ್ದು ₹3500 ಬೆಲೆಯನ್ನು. ಸರ್ಕಾರ ಮ್ಯಾರಥಾನ್ ‌ಸಭೆ ಮಾಡಿ ಕೊಟ್ಟಿದ್ದು ₹3,300 ಮಾತ್ರ. ಹಾಗಾದರೆ ಇವರು ರೈತರಿಗೆ ಕೊಟ್ಟಿದ್ದೇನು? ಸರ್ಕಾರ ಮಾಡಿರುವ ಮೋಸವನ್ನು ಪ್ರಶ್ನೆ ಮಾಡದೇ ರೈತರು ಸಂತೋಷಪಟ್ಟರೆ ನನ್ನದೇನು ಅಭ್ಯಂತರ ಇಲ್ಲ. ಆದರೆ, ಸರ್ಕಾರ ರೈತ ಕುಟುಂಬಗಳಿಗೆ ದೋಖಾ ಮಾಡಿದೆ ಎಂದು ದೂರಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

Good News, ಇನ್ಮುಂದೆ ಬೆಳ್ಳಿ ಮೇಲೂ ಸಿಗಲಿದೆ ಸಾಲ

ಬೇಲೇಕೇರಿ ಅಕ್ರಮ ಗಣಿಗಾರಿಕೆ, ಕೈ ಶಾಸಕ ಸತೀಶ್ ಸೈಲ್‌ಗೆ ಕೊಂಚ ರಿಲೀಫ್‌

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪೆರೇಡ್ ಗೆ ಅನುಮತಿ ಕೊಡ್ತಿದ್ದಂತೇ ಪ್ರಿಯಾಂಕ್ ಖರ್ಗೆ ಹೇಳಿದ್ದೇನು

ಮುಂದಿನ ಸುದ್ದಿ
Show comments