Publish Date: Wed, 11 Sep 2024 (15:24 IST)
Updated Date: Wed, 11 Sep 2024 (15:28 IST)
ಬೆಳಗಾವಿ: ಸ್ಥಿರವಾಗಿರುವ ನಮ್ಮ ಸರ್ಕಾರವನ್ನು ಸಹಿಸಿಕೊಳ್ಳಲು ಬಿಜೆಪಿಯವರಿಗೆ ಆಗುತ್ತಿಲ್ಲ. ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿ. ಈಗ ಸಿಎಂ ಸ್ಥಾನಕ್ಕೆ ರೇಸ್‌ನಲ್ಲಿ ಯಾರೂ ಇಲ್ಲವೇ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು.
ಸದ್ಯ ರಾಜ್ಯ ರಾಜಕಾರಣದಲ್ಲಿ ಸಿಎಂ ರೇಸ್ ಬಗ್ಗೆ ಚರ್ಚೆ ಜೋರಾಗಿ ನಡೆಯುತ್ತಿದೆ. ದೀಪಾವಳಿ ನಂತರ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು.
ರಾಜ್ಯದಲ್ಲಿ ಬಿಜೆಪಿಯವರು ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ. ಬದಲಿಗೆ ಕಾಂಗ್ರೆಸ್ ಸರ್ಕಾರ ಬೀಳಿಸಲು ಯತ್ನಿಸುವುದೇ ಅವರ ಕೆಲಸವಾಗಿದೆ ಎಂದು ಟೀಕಿಸಿದರು.
ಸಿಎಂ ಅವರ ರಾಜಕೀಯ ಭವಿಷ್ಯ ನಿರ್ಧಾರದ ಪ್ರಶ್ನೆಯೇ ಇಲ್ಲ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ನ್ಯಾಯಾಲಯದಲ್ಲಿ ನಮಗೆ ವ್ಯತಿರಿಕ್ತವಾದ ತೀರ್ಪು ಬರುವುದಿಲ್ಲ. ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಅಧಿಕಾರ ದುರುಪಯೋಗ ಪಡಿಸಿಕೊಂಡಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.