Webdunia - Bharat's app for daily news and videos

Install App

ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ: ಸಚಿವ ದಿನೇಶ್‌ ಗುಂಡೂರಾವ್

Sampriya
ಬುಧವಾರ, 11 ಸೆಪ್ಟಂಬರ್ 2024 (15:24 IST)
ಬೆಳಗಾವಿ: ಸ್ಥಿರವಾಗಿರುವ ನಮ್ಮ ಸರ್ಕಾರವನ್ನು ಸಹಿಸಿಕೊಳ್ಳಲು ಬಿಜೆಪಿಯವರಿಗೆ ಆಗುತ್ತಿಲ್ಲ. ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿ. ಈಗ ಸಿಎಂ ಸ್ಥಾನಕ್ಕೆ ರೇಸ್‌ನಲ್ಲಿ ಯಾರೂ ಇಲ್ಲವೇ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್‌ ಹೇಳಿದರು.

ಸದ್ಯ ರಾಜ್ಯ ರಾಜಕಾರಣದಲ್ಲಿ ಸಿಎಂ ರೇಸ್ ಬಗ್ಗೆ ಚರ್ಚೆ ಜೋರಾಗಿ ನಡೆಯುತ್ತಿದೆ. ದೀಪಾವಳಿ ನಂತರ ಕಾಂಗ್ರೆಸ್‌ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು.

ರಾಜ್ಯದಲ್ಲಿ ಬಿಜೆಪಿಯವರು ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ. ಬದಲಿಗೆ ಕಾಂಗ್ರೆಸ್‌ ಸರ್ಕಾರ ಬೀಳಿಸಲು ಯತ್ನಿಸುವುದೇ ಅವರ ಕೆಲಸವಾಗಿದೆ ಎಂದು ಟೀಕಿಸಿದರು.

ಸಿಎಂ ಅವರ ರಾಜಕೀಯ ಭವಿಷ್ಯ ನಿರ್ಧಾರದ ಪ್ರಶ್ನೆಯೇ ಇಲ್ಲ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ನ್ಯಾಯಾಲಯದಲ್ಲಿ ನಮಗೆ ವ್ಯತಿರಿಕ್ತವಾದ ತೀರ್ಪು ಬರುವುದಿಲ್ಲ. ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಅಧಿಕಾರ  ದುರುಪಯೋಗ ಪಡಿಸಿಕೊಂಡಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.



<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments