ಬೆಂಗಳೂರು-ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಗೆ 3000 ಕೋಟಿ ರೂ. ಒದಗಿಸಿರುವ ಸಿದ್ದರಾಮಯ್ಯ ಬಜೆಟ್ ಈ ಬಾರಿ ಸಾರಿಗೆ ಇಲಾಖೆಗೆ ಭರ್ಜರಿ ಯೋಜನೆಗಳನ್ನು ಘೋಷಿಸಿದೆ. ಶುಕ್ರವಾರ ಸಿಎಂ ಸಿದ್ದರಾಮಯ್ಯ ಮಂಡಿಸಿದ ಕರ್ನಾಟಕ ರಾಜ್ಯ ಬಜೆಟ್ 2024 ರಲ್ಲಿ ಸಾರಿಗೆ ಇಲಾಖೆಗೆ ಘೋಷಿಸಿದರು ಮುಖ್ಯ ಯೋಜನೆಗಳು ಹೀಗಿವೆ.
• ಉಡುಪಿ, ಚಿಕ್ಕಬಳ್ಳಾಪುರ, ನೆಲಮಂಗಲ, ಮಡಿಕೇರಿ, ಮಧುಗಿರಿ ಮತ್ತು ಹುಣಸೂರಿನಲ್ಲಿ 36 ಕೋಟಿ ರೂ. ವೆಚ್ಚದಲ್ಲಿ ಸ್ವಯಂ ಚಾಲಿತ ಚಾಲನಾಪಥ. ದೇವನಹಳ್ಳಿ ಮತ್ತು ತುಮಕೂರಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಸೀಜಿಂಗ್ ಯಾರ್ಡ್
• ಅರ್ಹತಾ ಪತ್ರ ನವೀಕರಣಕ್ಕಾಗಿ 32 ಸ್ಥಳಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಪರೀಕ್ಷಾ ಕೇಂದ್ರ
• ನೋಂದಣಿಯಾಗಿರುವ ಎಲ್ಲಾ ವಾಹನಗಳ ದಾಖಲಾತಿಗಳ ಡಿಜಿಟಲೀಕರಣ.
• 2024-25 ನೇ ಸಾಲಿನಲ್ಲಿ ಡಿಜಿಟಲೀಕರಣ ಪ್ರಾಯೋಗಿಕವಾಗಿ ಬೆಳಗಾವಿ, ಮಂಗಳೂರು, ಬೆಂಗಳೂರು ಕೇಂದ್ರ ಮತ್ತು ಭಾಲ್ಕಿಯಲ್ಲಿ ಜಾರಿ