ಬೆಂಗಳೂರು-ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಗೆ 3000 ಕೋಟಿ ರೂ. ಒದಗಿಸಿರುವ ಸಿದ್ದರಾಮಯ್ಯ ಬಜೆಟ್ ಈ ಬಾರಿ ಸಾರಿಗೆ ಇಲಾಖೆಗೆ ಭರ್ಜರಿ ಯೋಜನೆಗಳನ್ನು ಘೋಷಿಸಿದೆ. ಶುಕ್ರವಾರ ಸಿಎಂ ಸಿದ್ದರಾಮಯ್ಯ ಮಂಡಿಸಿದ ಕರ್ನಾಟಕ ರಾಜ್ಯ ಬಜೆಟ್ 2024 ರಲ್ಲಿ ಸಾರಿಗೆ ಇಲಾಖೆಗೆ ಘೋಷಿಸಿದರು ಮುಖ್ಯ ಯೋಜನೆಗಳು ಹೀಗಿವೆ.
•ಉಡುಪಿ, ಚಿಕ್ಕಬಳ್ಳಾಪುರ, ನೆಲಮಂಗಲ, ಮಡಿಕೇರಿ, ಮಧುಗಿರಿ ಮತ್ತು ಹುಣಸೂರಿನಲ್ಲಿ 36 ಕೋಟಿ ರೂ. ವೆಚ್ಚದಲ್ಲಿ ಸ್ವಯಂ ಚಾಲಿತ ಚಾಲನಾಪಥ. ದೇವನಹಳ್ಳಿ ಮತ್ತು ತುಮಕೂರಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಸೀಜಿಂಗ್ ಯಾರ್ಡ್
•ಅರ್ಹತಾ ಪತ್ರ ನವೀಕರಣಕ್ಕಾಗಿ 32 ಸ್ಥಳಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಪರೀಕ್ಷಾ ಕೇಂದ್ರ
•ನೋಂದಣಿಯಾಗಿರುವ ಎಲ್ಲಾ ವಾಹನಗಳ ದಾಖಲಾತಿಗಳ ಡಿಜಿಟಲೀಕರಣ.
•2024-25 ನೇ ಸಾಲಿನಲ್ಲಿ ಡಿಜಿಟಲೀಕರಣ ಪ್ರಾಯೋಗಿಕವಾಗಿ ಬೆಳಗಾವಿ, ಮಂಗಳೂರು, ಬೆಂಗಳೂರು ಕೇಂದ್ರ ಮತ್ತು ಭಾಲ್ಕಿಯಲ್ಲಿ ಜಾರಿ