Select Your Language

Notifications

webdunia
webdunia
webdunia
webdunia

ದಿವಾನ್ ಮಿರ್ಜಾ ಇಸ್ಮಾಯಿಲ್ ಮಹಾರಾಜರನ್ನು ಮೆರವಣಿಗೆ ಮಾಡಿಸ್ತಿದ್ರು: ಸಿದ್ದರಾಮಯ್ಯ

CM Siddaramaiah

Krishnaveni K

ಬೆಂಗಳೂರು , ಮಂಗಳವಾರ, 2 ಸೆಪ್ಟಂಬರ್ 2025 (14:13 IST)

ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ರನ್ನು ಆಯ್ಕೆ ಮಾಡಿರುವುದನ್ನು ಬಿಜೆಪಿ ವಿರೋಧಿಸುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ದಿವಾನ್ ಮಿರ್ಜಾ ಇಸ್ಮಾಯಿಲ್ ಮಹಾರಾಜರನ್ನು ಅಂಬಾರಿ ಮೇಲೆ ಕೂರಿಸಿಕೊಂಡು ಮೆರವಣಿಗೆ ಮಾಡುತ್ತಿದ್ದಾಗ ಬಿಜೆಪಿಯವರು ಎಲ್ಲಿದ್ರು ಎಂದು ಕೇಳಿದ್ದಾರೆ.

‘ದಿವಾನ್ ಮಿರ್ಜಾ ಇಸ್ಮಾಯಿಲ್ ಅವರನ್ನು ಮಹಾರಾಜರು ಅಂಬಾರಿ ಮೇಲೆ ಕೂಡಿಸಿಕೊಂಡು ಮೆರವಣಿಗೆ ಮಾಡುತ್ತಿದ್ದರು. 2017ರಲ್ಲಿ ಕವಿ ನಿಸಾರ್ ಅಹಮದ್ ಅವರು ದಸರಾ ಉದ್ಘಾಟನೆ ಮಾಡಿದ್ದರು. ಆಗ ಆರ್‌ಎಸ್‌ಎಸ್‌ ಹಾಗೂ ಬಿಜೆಪಿಯವರು ಎಲ್ಲಿ ಹೋಗಿದ್ದರು?

ಬಾನು ಅವರು ಕುಂಕುಮ, ಅರಶಿನದ ಬಗ್ಗೆ ಮಾತನಾಡಿದ್ದಾರೆ ಎನ್ನುವುದು ನನಗೆ ತಿಳಿದಿಲ್ಲ. ಅವರೊಬ್ಬ ಕನ್ನಡದ ಬರಹಗಾರ್ತಿ. ಕನ್ನಡದ ಮೇಲೆ ಅಭಿಮಾನವಿಲ್ಲದೆ ಇದ್ದರೆ, ಪ್ರೀತಿ ಇಲ್ಲದೆ ಇದ್ದರೆ ಬರೆಯಲು ಸಾಧ್ಯವೇ?

ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಓರ್ವ ಮುಸ್ಲಿಂ ಮಹಿಳೆಯಾಗಿದ್ದು, ಕುಂಕುಮ ಹಚ್ಚಿಕೊಳ್ಳುವುದು ಅವರ ಧರ್ಮದಲ್ಲಿಲ್ಲ. ದಸರಾ ಹಬ್ಬವನ್ನು ನಾಡಹಬ್ಬ ಎಂದು ಆಚರಿಸುತ್ತೇವೆ. ಬೇರೆ ಧರ್ಮದವರನ್ನು ಉದ್ಘಾಟಕರನ್ನಾಗಿ ಆಹ್ವಾನಿಸಿದರೆ ಕುಂಕುಮ ಹಚ್ಚಿಕೊಂಡು ಬನ್ನಿ, ಹಿಂದೂಗಳಾಗಿ ಎನ್ನುವುದು ತರವಲ್ಲ. ಮುಸ್ಲಿಂ ಗುರುಗಳು ಮುಷ್ತಾಕ್ ಅವರ ವಿರುದ್ಧ ಫತ್ವಾ ಹೊರಡಿಸಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ’ ಎಂದಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಸೌಜನ್ಯ ಪ್ರಕರಣದಲ್ಲಿ ಮರುತನಿಖೆ ಬೇಕಾದ್ರೆ ಕೋರ್ಟ್ ಗೆ ಹೋಗಲಿ: ಸಿಎಂ ಸಿದ್ದರಾಮಯ್ಯ