Webdunia - Bharat's app for daily news and videos

Install App

ದಿವಾನ್ ಮಿರ್ಜಾ ಇಸ್ಮಾಯಿಲ್ ಮಹಾರಾಜರನ್ನು ಮೆರವಣಿಗೆ ಮಾಡಿಸ್ತಿದ್ರು: ಸಿದ್ದರಾಮಯ್ಯ

Krishnaveni K
ಮಂಗಳವಾರ, 2 ಸೆಪ್ಟಂಬರ್ 2025 (14:13 IST)

ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ರನ್ನು ಆಯ್ಕೆ ಮಾಡಿರುವುದನ್ನು ಬಿಜೆಪಿ ವಿರೋಧಿಸುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ದಿವಾನ್ ಮಿರ್ಜಾ ಇಸ್ಮಾಯಿಲ್ ಮಹಾರಾಜರನ್ನು ಅಂಬಾರಿ ಮೇಲೆ ಕೂರಿಸಿಕೊಂಡು ಮೆರವಣಿಗೆ ಮಾಡುತ್ತಿದ್ದಾಗ ಬಿಜೆಪಿಯವರು ಎಲ್ಲಿದ್ರು ಎಂದು ಕೇಳಿದ್ದಾರೆ.

‘ದಿವಾನ್ ಮಿರ್ಜಾ ಇಸ್ಮಾಯಿಲ್ ಅವರನ್ನು ಮಹಾರಾಜರು ಅಂಬಾರಿ ಮೇಲೆ ಕೂಡಿಸಿಕೊಂಡು ಮೆರವಣಿಗೆ ಮಾಡುತ್ತಿದ್ದರು. 2017ರಲ್ಲಿ ಕವಿ ನಿಸಾರ್ ಅಹಮದ್ ಅವರು ದಸರಾ ಉದ್ಘಾಟನೆ ಮಾಡಿದ್ದರು. ಆಗ ಆರ್‌ಎಸ್‌ಎಸ್‌ ಹಾಗೂ ಬಿಜೆಪಿಯವರು ಎಲ್ಲಿ ಹೋಗಿದ್ದರು?

ಬಾನು ಅವರು ಕುಂಕುಮ, ಅರಶಿನದ ಬಗ್ಗೆ ಮಾತನಾಡಿದ್ದಾರೆ ಎನ್ನುವುದು ನನಗೆ ತಿಳಿದಿಲ್ಲ. ಅವರೊಬ್ಬ ಕನ್ನಡದ ಬರಹಗಾರ್ತಿ. ಕನ್ನಡದ ಮೇಲೆ ಅಭಿಮಾನವಿಲ್ಲದೆ ಇದ್ದರೆ, ಪ್ರೀತಿ ಇಲ್ಲದೆ ಇದ್ದರೆ ಬರೆಯಲು ಸಾಧ್ಯವೇ?

ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಓರ್ವ ಮುಸ್ಲಿಂ ಮಹಿಳೆಯಾಗಿದ್ದು, ಕುಂಕುಮ ಹಚ್ಚಿಕೊಳ್ಳುವುದು ಅವರ ಧರ್ಮದಲ್ಲಿಲ್ಲ. ದಸರಾ ಹಬ್ಬವನ್ನು ನಾಡಹಬ್ಬ ಎಂದು ಆಚರಿಸುತ್ತೇವೆ. ಬೇರೆ ಧರ್ಮದವರನ್ನು ಉದ್ಘಾಟಕರನ್ನಾಗಿ ಆಹ್ವಾನಿಸಿದರೆ ಕುಂಕುಮ ಹಚ್ಚಿಕೊಂಡು ಬನ್ನಿ, ಹಿಂದೂಗಳಾಗಿ ಎನ್ನುವುದು ತರವಲ್ಲ. ಮುಸ್ಲಿಂ ಗುರುಗಳು ಮುಷ್ತಾಕ್ ಅವರ ವಿರುದ್ಧ ಫತ್ವಾ ಹೊರಡಿಸಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video:ಹಾಸನ: ಗಣೇಶ ಮೆರವಣಿಗೆ ಮೇಲೆ ಟ್ರಕ್ ಹರಿದು ದುರಂತಕ್ಕೆ ನಿಜ ಕಾರಣ ಬಯಲು

ಮದ್ದೂರಿನಲ್ಲಿ‌ ಗುಡುಗಿದ ಹಿಂದೂ ನಾಯಕ ಬಸನಗೌಡ ಪಾಟೀಲ್ ವಿರುದ್ಧ ಕೇಸ್

ಮದ್ದೂರು ಗಲಭೆ ಬೆನ್ನಲ್ಲೇ ಮಂಡ್ಯ ಹೆಚ್ಚುವರಿ ಎಸ್‌ಪಿ ವರ್ಗಾವಣೆ

ಅಮೆರಿಕಾದ ಬಲಪಂಥಿಯ ನಾಯಕ ಚಾರ್ಲಿ ಹಂತಕನ ಬಂಧನ

ಸ್ಪೈಸ್‌ಜೆಟ್ ಟೇಕ್ ಆಫ್ ಆದ ಕ್ಷಣದಲ್ಲೇ ಕಳಚಿದ ಚಕ್ರ, ಮುಂದೇನಾಯ್ತು ಗೊತ್ತಾ

ಮುಂದಿನ ಸುದ್ದಿ
Show comments